ಮಡಿಕೇರಿ: ಜಿಲ್ಲಾಡಳಿತ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು ಮತ್ತಿತರ ಇಲಾಖೆಯ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಗಿಡ ನೆಟ್ಟ ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ನಂತರ ಮಕ್ಕಳಿಗೆ ಮಧ್ಯಾಹ್ನ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಹಾಜರಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಅನಿತಾ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಮಕ್ಕಳೊಂದಿಗೆ ಸಾಲಿನಲ್ಲಿ ನಿಂತು ಉಪಹಾರ ಸೇವಿಸಿದರು.

ಕೊಡಗು ಅರಣ್ಯ ವೃತ್ತದ ಮುಖ್ಯ ಸಂರಕ್ಷಣಾಧಿಕಾರಿ ಬಿಎನ್‌ಎನ್ ಮೂರ್ತಿ, ಉಪಅರಣ್ಯ ಸಂರಕ್ಷಣಾಧಿಕಾರಿಗಳಾದ ಎ.ಟಿ. ಪೂವಯ್ಯ, ಶಿವರಾಮ್ ಬಾಬು, ಪೂರ್ಣಿಮ, ಡಿಡಿಪಿಐ ವೇದಮೂರ್ತಿ, ಪರಿಸರ ಅಧಿಕಾರಿ ಪಿ.ಕೆ. ಉಮಾಶಂಕರ್ ಮತ್ತಿತರ ಅಧಿಕಾರಿಗಳು ಮಕ್ಕಳ ಜತೆಗೂಡಿ ಆಹಾರ ಸೇವಿಸಿದರು.ವೀರಾಜಪೇಟೆ: ಜಯಪ್ರಕಾಶ್ ನಾರಾಯಣ ಸ್ಮಾರಕ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ವನಮಹೋತ್ಸವ ಆಚರಿಸಲಾಯಿತು.

ಮುಖ್ಯೋಪಾಧ್ಯಾಯ ಲಾಲ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಸ್ತುತ ವಾತಾವರಣದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಪರಿಸರವನ್ನು ಉಳಿಸುವ ಅಗತ್ಯತೆ ಹೆಚ್ಚಿದೆ. ಪ್ರತಿಯೊಬ್ಬರೂ ಒಂದೊAದು ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರಕ್ಕೆ ನಮ್ಮ ಕಾಣಿಕೆ ನೀಡಬೇಕು. ಪರಿಸರ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ಪರಿಸರಕ್ಕೆ ಏನು ಕೊಡುತ್ತಿದ್ದೇವೆ ಎಂದು ತಿಳಿಯಬೇಕಾಗಿದೆ. ಪರಿಸರವನ್ನು ಉಳಿಸಲು ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದು ತಿಳಿಸಿದರು.

ಶಾಲಾ ಆವರಣದಲ್ಲಿ ಹೊಂಗೆ, ನೆಲ್ಲಿಕಾಯಿ, ಸೀಬೆಕಾಯಿಯಂತಹ ವಿವಿಧ ಜಾತಿಗಳ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಲೋಟಸ್ ಇಕೋ ಕ್ಲಬ್ ಸಂಚಾಲಕಿ ಪುಷ್ಪ, ಸಹ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ವೀರಾಜಪೇಟೆ: ಜಯಪ್ರಕಾಶ್ ನಾರಾಯಣ ಸ್ಮಾರಕ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ವನಮಹೋತ್ಸವ ಆಚರಿಸಲಾಯಿತು.

ಮುಖ್ಯೋಪಾಧ್ಯಾಯ ಲಾಲ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಸ್ತುತ ವಾತಾವರಣದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಪರಿಸರವನ್ನು ಉಳಿಸುವ ಅಗತ್ಯತೆ ಹೆಚ್ಚಿದೆ. ಪ್ರತಿಯೊಬ್ಬರೂ ಒಂದೊAದು ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರಕ್ಕೆ ನಮ್ಮ ಕಾಣಿಕೆ ನೀಡಬೇಕು. ಪರಿಸರ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ಪರಿಸರಕ್ಕೆ ಏನು ಕೊಡುತ್ತಿದ್ದೇವೆ ಎಂದು ತಿಳಿಯಬೇಕಾಗಿದೆ. ಪರಿಸರವನ್ನು ಉಳಿಸಲು ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದು ತಿಳಿಸಿದರು.

ಶಾಲಾ ಆವರಣದಲ್ಲಿ ಹೊಂಗೆ, ನೆಲ್ಲಿಕಾಯಿ, ಸೀಬೆಕಾಯಿಯಂತಹ ವಿವಿಧ ಜಾತಿಗಳ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಲೋಟಸ್ ಇಕೋ ಕ್ಲಬ್ ಸಂಚಾಲಕಿ ಪುಷ್ಪ, ಸಹ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.*ಗೋಣಿಕೊಪ್ಪ: ತಿತಿಮತಿ, ಮರೂರು ಆಶ್ರಮ ಶಾಲೆಯಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವೀರಾಜಪೇಟೆ ಮಂಡಲ ಬಿಜೆಪಿ ಎಸ್.ಸಿ. ಮೋರ್ಚಾ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿತು.

ನಂತರ ವಿದ್ಯಾರ್ಥಿಗಳಿಗೆ ಮರ, ಗಿಡಗಳ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿ ಪರಿಸರವನ್ನು ರಕ್ಷಿಸುವ ಬಗ್ಗೆ ಮತ್ತು ಮರ ಬೆಳೆಸುವ ಮೂಲಕ ಪರಿಸರವನ್ನು ಆರೋಗ್ಯವಾಗಿಡುವ ಕಾರ್ಯಗಳಿಗೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಲಾಯಿತು. ಆಶ್ರಮದ ಆವರಣದ ಸುತ್ತ ಸಂಪಿಗೆ, ದಾಳಿಂಬೆ, ಗಸಗಸೆ, ನೆಲ್ಲಿ ಸೇರಿದಂತೆ ಹಲವಾರು ಗಿಡಗಳನ್ನು ಅಧ್ಯಕ್ಷೆ ಶಶಿ, ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಜ್ಯೋತಿ, ಸುಶಿಲಾ ಹಾಗೂ ಸಮಿತಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ನೆಟ್ಟರು.ಸೋಮವಾರಪೇಟೆ: ಪರಿಸರ ಸಂರಕ್ಷಣೆಯು ಎಲ್ಲರ ಮೂಲಭೂತ ಕರ್ತವ್ಯವಾಗಿದ್ದು, ಈ ಹೊಣೆಗಾರಿಕೆಯಿಂದ ಹಿಂದೆ ಸರಿದರೆ ಭವಿಷ್ಯದಲ್ಲಿ ಗಂಡಾAತರ ನಿಶ್ಚಿತ. ಪ್ರಕೃತಿ ಹಾಗೂ ಜೀವ ವೈವಿಧ್ಯತೆಯ ರಕ್ಷಣೆಯಾಗಬೇಕು. ಮುಂದಿನ ದಿನಗಳಲ್ಲಿ ಆಕ್ಸಿಜನ್ ಸಿಲಿಂಡರ್‌ಗಳನ್ನು ಬೆನ್ನಿಗೆ ಕಟ್ಟಿಕೊಂಡು ಓಡಾಡುವ ಪರಿಸ್ಥಿತಿ ಬರಬಾರದು ಎಂದು ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಗೋಕುಲ್ ಆಶಯ ವ್ಯಕ್ತಪಡಿಸಿದರು.

ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ, ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಶಿಕ್ಷಕರ ಸಂಘಟನೆಗಳು, ಕಂದಾಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪವಿತ್ರ ಗ್ರಂಥವಾಗಿರುವ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗದಂತೆ ಪ್ರತಿಯೋರ್ವರೂ ತಮ್ಮ ಕರ್ತವ್ಯ ನಿರ್ವಹಿಸಬೇಕು. ಪರಿಸರ ಸಂರಕ್ಷಣೆಗೆ ಸಂಬAಧಿಸಿದAತೆ ಹಲವು ಕಾಯ್ದೆ-ಕಾನೂನುಗಳಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ನ್ಯಾಯಾಧೀಶರು ಅಭಿಪ್ರಾಯಿಸಿದರು.

ಮುಖ್ಯ ಅತಿಥಿಯಾಗಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮುಖ್ಯ. ಪ್ರತಿಯೋರ್ವರೂ ತಮ್ಮ ಮನೆಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಇಂದು ನಾವು ಪರಿಸರ ರಕ್ಷಣೆ ಮಾಡಿದರೆ ಮಾತ್ರ ಮುಂದಿನ ಪೀಳಿಗೆಯನ್ನು ಪರಿಸರ ರಕ್ಷಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ಆರ್. ಗೋವಿಂದರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪದ್ಮನಾಭ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಪ್ರೇಮ್‌ಕುಮಾರ್, ಪ.ಪಂ. ನಾಮನಿರ್ದೇಶನ ಸದಸ್ಯ ಎಸ್. ಮಹೇಶ್, ಪ್ರೌಢಶಾಲಾ ಉಪ ಪ್ರಾಂಶುಪಾಲ ಬಸವರಾಜು, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಅಣ್ಣಮ್ಮ ಸೇರಿದಂತೆ ಇತರರು ಹಾಜರಿದ್ದರು.

ಪರಿಸರ ದಿನಾಚರಣೆ ಪ್ರಯುಕ್ತ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನ್ಯಾಯಾಧೀಶರುಗಳು ಹಾಗೂ ಅತಿಥಿಗಳು ವಿವಿಧ ಜಾತಿಯ ಗಿಡಗಳನ್ನು ನೆಟ್ಟರು. ನಂತರ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರುಗಳು ಕಾಲೇಜು ಆವರಣದಿಂದ ಚನ್ನಬಸಪ್ಪ ಸಭಾಂಗಣದವರೆಗೆ ಪರಿಸರ ಜಾಗೃತಿ ಜಾಥಾ ನಡೆಸಿದರು. ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮ್‌ಕುಮಾರ್ ಅವರು ಪರಿಸರ ಪ್ರತಿಜ್ಞೆ ಬೋಧಿಸಿದರು. ಶಿಕ್ಷಕ ಉ.ರಾ. ನಾಗೇಶ್, ಬಿಆರ್‌ಪಿ ಲೋಕೇಶ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.ಸಿದ್ದಾಪುರ: ಡೋಮಿನೊಸ್ ಯುವಕ ಸಂಘದ ವತಿಯಿಂದ ‘ಸ್ವಚ್ಛ ಕೊಡಗು ಹಸಿರು ಕೊಡಗು’ ಅಭಿಯಾನದ ಪ್ರಯುಕ್ತ ಪಾಲಿಬೆಟ್ಟ ಚೆಶೈರ್ ಹೋಮ್ಸ್ ವಿಶೇಷ ಶಾಲೆಯಲ್ಲಿ ಹೂವಿನ ಗಿಡಗಳನ್ನು ನೆಡುವ ಮುಖಾಂತರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ಶಿವರಾಜ್ ಮಾತನಾಡಿ, ಡೊಮಿನೊಸ್ ಯುವಕ ಸಂಘ ಕೊಡಗಿನ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಲ್ಲಿ, ಪ್ಲಾಸ್ಟಿಕ್ ಮುಕ್ತ ಕೊಡಗು ಅಭಿಯಾನ, ಕಾವೇರಿ ನದಿ ಸಂರಕ್ಷಣಾ ಅಭಿಯಾನ, ಹೀಗೆ ಹಲವಾರು ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಂಘದ ಕಾರ್ಯ ಹೀಗೇ ಮುಂದುವರಿಸಲಿ ಎಂದು ಆಶಿಸಿದರು.

ಈ ಸಂದರ್ಭ ಡೋಮಿನೊಸ್ ಯುವಕ ಸಂಘದ ಅಧ್ಯಕ್ಷ ಶೌಕತ್ ಅಲಿ ಎನ್.ಎಂ., ಮುಖ್ಯ ಶಿಕ್ಷಕ ಶಿವರಾಜ್, ಉಪ ಕಾರ್ಯದರ್ಶಿ ಶಿಹಾಬುದ್ದೀನ್ ವಿ.ಪಿ.ಎಸ್., ಡೊಮಿನೊಸ್ ಯುವಕ ಸಂಘದ ಸದಸ್ಯರುಗಳಾದ ಹಬೀಬ್, ದರ್ಶನ್ ಗೌಡ, ಸಿನಾನ್, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.ಶನಿವಾರಸಂತೆ: ವಿದ್ಯಾಸಂಸ್ಥೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರತಿ ವಿದ್ಯಾರ್ಥಿ ಒಂದೊAದು ಗಿಡ ನೆಟ್ಟು ಪೋಷಿಸಿದರೆ ಆ ಮರಕ್ಕೆ ವಿದ್ಯಾರ್ಥಿಯ ಹೆಸರನ್ನೇ ಇಡಲಾಗುವುದು ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಹಾಗೂ ಹೈಕೋರ್ಟ್ ವಕೀಲ ಹೆಚ್.ಎಸ್. ಚಂದ್ರಮೌಳಿ ಪ್ರೋತ್ಸಾಹದ ನುಡಿಗಳನ್ನಾಡಿದರು.

ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಜೂನಿಯರ್ ಕಾಲೇಜಿನ ಆವರಣದಲ್ಲಿ ಪ್ರೌಢಶಾಲಾ ವಿಭಾಗ ಹಾಗೂ ಹೇಮಾವತಿ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಭೂಮಿಯ ಉಳಿವು ಪರಿಸರದ ಸಮತೋಲನದಲ್ಲಿದೆ. ಮರ-ಗಿಡಗಳನ್ನು ನೆಡುವ ಮೂಲಕ ಪ್ರಕೃತಿಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ ಅವರು, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.

ವಿದ್ಯಾರ್ಥಿಗಳು, ಶಿಕ್ಷಕರು, ಅರಣ್ಯ ಇಲಾಖೆ ಉಚಿತವಾಗಿ ವಿತರಿಸಿದ್ದ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಸಂಸ್ಥೆಯ ಆವರಣದಲ್ಲಿ ನೆಟ್ಟು ಸಂಭ್ರಮಿಸಿದರು.

ವಿದ್ಯಾಸAಸ್ಥೆ ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕ ಯತೀಶ್ ಕುಮಾರ್, ಪದವಿ ಕಾಲೇಜಿನ ಪ್ರಾಂಶುಪಾಲ ನಿರಂಜನ್, ಮುಖ್ಯಶಿಕ್ಷಕ ಅಬ್ದುಲ್ ರಬ್, ಇಕೋ ಕ್ಲಬ್ ಕಾರ್ಯದರ್ಶಿ ಶಿವಕುಮಾರ್, ಸದಸ್ಯರಾದ ಉಮೇಶ್, ಈಶ್ವರ್, ಶಿಕ್ಷಕರು ಹಾಜರಿದ್ದರು.ಶನಿವಾರಸಂತೆ: ವಿದ್ಯಾಸಂಸ್ಥೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರತಿ ವಿದ್ಯಾರ್ಥಿ ಒಂದೊAದು ಗಿಡ ನೆಟ್ಟು ಪೋಷಿಸಿದರೆ ಆ ಮರಕ್ಕೆ ವಿದ್ಯಾರ್ಥಿಯ ಹೆಸರನ್ನೇ ಇಡಲಾಗುವುದು ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಹಾಗೂ ಹೈಕೋರ್ಟ್ ವಕೀಲ ಹೆಚ್.ಎಸ್. ಚಂದ್ರಮೌಳಿ ಪ್ರೋತ್ಸಾಹದ ನುಡಿಗಳನ್ನಾಡಿದರು.

ವಿದ್ಯಾಸAಸ್ಥೆ ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕ ಯತೀಶ್ ಕುಮಾರ್, ಪದವಿ ಕಾಲೇಜಿನ ಪ್ರಾಂಶುಪಾಲ ನಿರಂಜನ್, ಮುಖ್ಯಶಿಕ್ಷಕ ಅಬ್ದುಲ್ ರಬ್, ಇಕೋ ಕ್ಲಬ್ ಕಾರ್ಯದರ್ಶಿ ಶಿವಕುಮಾರ್, ಸದಸ್ಯರಾದ ಉಮೇಶ್, ಈಶ್ವರ್, ಶಿಕ್ಷಕರು ಹಾಜರಿದ್ದರು.*ಸಿದ್ದಾಪುರ: ನಂಜರಾಯಪಟ್ಟಣ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪರಿಸರ ದಿನವನ್ನು ಆಚರಿಸಲಾಯಿತು. ಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆವರಣ ಹಾಗೂ ಪಟ್ಟಣದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.ಚೆಯ್ಯಂಡಾಣೆ: ಚೇಲಾವರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಸಸಿ ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಮುಂಡಿಯೋಳAಡ ಈರಪ್ಪ, ವಾಣಿ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಬಿದ್ದಪ್ಪ, ಗ್ರಾಮಸ್ಥರಾದ ದೀರಜ್, ಕೆ.ಯು. ರಾಧಾಕೃಷ್ಣ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇದ್ದರು.ಸೋಮವಾರಪೇಟೆ: ಸಂತ ಜೋಸೆಫರ ವಿದ್ಯಾಸಂಸ್ಥೆಯ ಇಕೋ ಕ್ಲಬ್ ಘಟಕದ ವತಿಯಿಂದ ವಿದ್ಯಾಸಂಸ್ಥೆಯ ಓಎಲ್‌ವಿ ಚರ್ಚ್ ಆವರಣದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ಸಂಚಾಲಕ ಫಾ. ರಾಯಪ್ಪ ಅವರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೋರ್ವರೂ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.

ನಂತರ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.ಸಿದ್ದಾಪುರ: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರ ಹಾಜರಾತಿಯಲ್ಲಿ ವಿವಿಧ ತರದ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಸಿದ್ದಾಪುರ: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರ ಹಾಜರಾತಿಯಲ್ಲಿ ವಿವಿಧ ತರದ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಸುಂಟಿಕೊಪ್ಪ: ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರದ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ದಿನ ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ರಫೀಕ್‌ಖಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಗೀತಾ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರೋಹಿತ್ ಮಾತನಾಡಿ, ಪರಿಸರ ಸಸ್ಯ ಸಂಕುಲಗಳು ಉಳಿದರೆ ಮಾನವನಿಗೆ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಾಗಲಿದೆ. ಮರ, ಗಿಡಗಳು ನಮ್ಮ ಉಸಿರಾಗಿದ್ದು ಹೊಂಗೆ, ಬೇವು, ತುಳಸಿ, ತುಂಬೆ ಗಿಡಗಳನ್ನು ಹೆಚ್ಚಾಗಿ ಬೆಳೆಸುವುದರಿಂದ ಆಮ್ಲಜನಕ ಹೆಚ್ಚು ಉತ್ಪತ್ತಿಯಾಗಲಿದೆ. ಗಿಡಗಳನ್ನು ನೆಡುವ ಹವ್ಯಾಸ ಬೆಳೆಸಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಂದಿದ್ದ ಹಣ್ಣಿನ ಗಿಡಗಳನ್ನು ಅತಿಥಿಗಳು ಶಾಲಾ ಆವರಣದಲ್ಲಿ ನೆಟ್ಟರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪ್ರಸಾದ್ ಕುಟ್ಟಪ್ಪ, ಸದಸ್ಯರುಗಳಾದ ಪಿ.ಆರ್. ಸುನಿಲ್ ಕುಮಾರ್, ಪಿ.ಎಫ್. ಸಬಾಸ್ಟಿನ್, ಶಬ್ಬೀರ್, ಜೀನಾಸುದ್ದೀನ್, ಸೋಮನಾಥ್, ರೇಷ್ಮ, ಒಕ್ಕೂಟದ ಅಧ್ಯಕ್ಷೆ ರಮಣಿ, ಸಂದ್ಯಾ, ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಪುಷ್ಪಾಲತಾ, ಸೇವಾಪ್ರತಿನಿಧಿಗಳಾದ ಜ್ಯೋತಿ ಲಕ್ಷಿö್ಮÃ, ಚಿತ್ರಾ, ಯಶೋಧ, ಮಾಲಿನಿ, ನಂದಿನಿ, ಕುಸುಮ ಹಾಗೂ ವಿವಿಧ ಸಂಘದ ಸದಸ್ಯರು, ನವ ಜೀವನ ಸಮಿತಿ ಸದಸ್ಯರುಗಳು ಮತ್ತಿತರರು ಇದ್ದರು. ಶನಿವಾರಸಂತೆ: ನಮ್ಮ ಭೂಮಿ ಸದಾ ಹಸಿರಾಗಿರಲು ಪ್ರತಿಯೊಬ್ಬರು ಗಿಡ ನೆಡಬೇಕು. ಪರಿಸರ ಸಮತೋಲನಕ್ಕಾಗಿ ಗಿಡ ನೆಡುವುದು ಅಗತ್ಯವಾಗಿದ್ದು, ಪ್ರತಿ ನಾಗರಿಕರು, ಸಾರ್ವಜನಿಕರು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅರಣ್ಯ ಬೆಳೆಸಬೇಕು ಎಂದು ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಕರೆ ನೀಡಿದರು.

ಶನಿವಾರಸಂತೆ ಅರಣ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾಶೇಖರ್, ಉಪಾಧ್ಯಕ್ಷ ನಿತಿನ್, ಸದಸ್ಯರಾದ ಮನು ಮಹಾಂತೇಶ್, ರಘು, ಮನು, ಉಪ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್, ಶಿವಕುಮಾರ್, ಸೂರಯ್ಯ, ಸಿಬ್ಬಂದಿ ಲೋಹಿತ್, ಜಯಕುಮಾರ್, ಅರಣ್ಯ ರಕ್ಷಕರಾದ ಶಿವಪ್ಪ, ನಾಗೇಶ್, ಕಾರ್ತಿಕ್ ಹಾಜರಿದ್ದರು.ಸೋಮವಾರಪೇಟೆ: ಇಲ್ಲಿನ ವೆಂಕಟೇಶ್ವರ ಬ್ಲಾಕ್ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ, ಮಹಿಳಾ ಮೇಲ್ವಿಚಾರಕಿ ಸಾವಿತ್ರಿ, ಅಂಗನವಾಡಿ ಕಾರ್ಯಕರ್ತೆ ಜೆನಿಫರ್ ತಾರಾ, ಜಗದಾಂಭ, ರೇಣುಕಾ, ಆರೋಗ್ಯ ಅಧಿಕಾರಿ ಜಾಸ್ಮಿನ್ ಸೇರಿದಂತೆ ಇತರರು ಹಾಜರಿದ್ದರು.