ಬೆಂಗಳೂರು, ಜೂ. ೧೦: ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರವೇಶಾತಿ ಸಮಯವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

ಸಿಬಿಎಸ್‌ಇ ಮತ್ತು ಐಸಿಎಸ್‌ಸಿಯ ೧೦ನೇ ತರಗತಿಯ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಇದರಿಂದಾಗಿ ಪ್ರಥಮ ಪಿಯುಸಿ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿ ದಿನಾಂಕವನ್ನು ದಂಡ ಶುಲ್ಕವಿಲ್ಲದೇ ೧೬.೦೬.೨೦೨೨ ರಿಂದ ಜುಲೈ ೧೧ರವರೆಗೂ ವಿಸ್ತರಿಸಿ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಪ್ರವೇಶಾತಿ ದಿನಾಂಕ ಜೂ.೧೫ವರೆಗೂ ಮತ್ತು ದಂಡ ಶುಲ್ಕದೊಂದಿದೆ ಜೂನ್ ೩೦ರವರೆಗೆ ನಿಗದಿಪಡಿಸಲಾಗಿತ್ತು. ಆದರೆ ಸಿಬಿಎಸ್‌ಇ ಹಾಗೂ ಐಸಿಎಸ್‌ಸಿ ಬೋರ್ಡ್ಗಳಲ್ಲಿ ಹತ್ತನೇ ತರಗತಿಯ ಫಲಿತಾಂಶ ಪ್ರಕಟಣೆ ತಡವಾಗುತ್ತಿರುವುದರಿಂದ ಅನೇಕ ಪೋಷಕರು ವಿದ್ಯಾರ್ಥಿಗಳು ಪ್ರವೇಶಾತಿ ದಿನಾಂಕವನ್ನು ವಿಸ್ತರಿಸುವಂತೆ ಮನವಿಯನ್ನು ಮಾಡಿದ್ದರು. ಹೀಗಾಗಿ ದಿನಾಂಕ ವಿಸ್ತರಣೆ ಮಾಡಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಕೇವಲ ಪ್ರಥಮ ಪಿಯುಸಿಗೆ ಮಾತ್ರ ಅನ್ವಯವಾಗಲಿದೆ. ದ್ವಿತೀಯ ಪಿಯುಸಿ ದಾಖಲಾತಿ ದಿನಾಂಕವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.