ರಂಜನ್ ಭರವಸೆ

ಕುಶಾಲನಗರ, ಜೂ. ೯: ಕುಶಾಲನಗರದಿಂದ ಅಳುವಾರ ಸ್ನಾತಕೋತ್ತರ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ತಿಳಿಸಿದ್ದಾರೆ.

ಅವರು ಭಾನುವಾರ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರದ ಅಧಿಕಾರಿಗಳ ಮನವಿಗೆ ಸ್ಪಂದಿಸಿ, ಈ ಬಗ್ಗೆ ಸಂಬAಧಿಸಿದ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಬಂದು ಕುಶಾಲನಗರದ ಮೂಲಕ ಉನ್ನತ ವ್ಯಾಸಂಗಕ್ಕೆ ದಿನನಿತ್ಯ ತೆರಳುವ ವಿದ್ಯಾರ್ಥಿಗಳಿಗೆ ಕೇಂದ್ರಕ್ಕೆ ತೆರಳಲು ಬಸ್ ಸೌಲಭ್ಯದ ಕೊರತೆ ಕಂಡುಬAದಿದ್ದು ಈ ಹಿನ್ನೆಲೆಯಲ್ಲಿ ಶಾಸಕರ ಗಮನ ಸೆಳೆಯಲಾಯಿತು.

ಸುಮಾರು ಮೂವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ದಿನ ನಿತ್ಯ ಕುಶಾಲನಗರ ಮೂಲಕ ಉನ್ನತ ವ್ಯಾಸಂಗಕ್ಕೆ ತೆರಳಬೇಕಾಗಿದ್ದು ಕಾಲೇಜಿಗೆ ತೆರಳಿ ಹಿಂತಿರುಗಲು ಸಮಯಕ್ಕೆ ಸರಿಯಾಗಿ ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವ ಬಗ್ಗೆ ಶಕ್ತಿ ಪತ್ರಿಕೆಯಲ್ಲಿ ಈ ಹಿಂದೆ ವರದಿ ಆಗಿರುವುದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯ ರಸ್ತೆ ಸಾರಿಗೆ ಮಡಿಕೇರಿ ಘಟಕ ಅಧಿಕಾರಿಗಳಿಗೆ ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಿಬ್ಬಂದಿಗಳ ಕೊರತೆ ಇರುವುದಾಗಿ ಸಬೂಬು ಹೇಳುತ್ತಿರುವ ಬಗ್ಗೆ ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಂಬAಧಿಸಿದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಶಾಸಕ ರಂಜನ್ ಈ ಸಂದರ್ಭ ಹೇಳಿದರು.