ಕೂಡಿಗೆ, ಜೂ. ೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕ ಪೂಜಾ ಕಾರ್ಯಕ್ರಮ ತಾ. ೧೦ ರಂದು (ಇಂದು) ನಡೆಯಲಿದೆ.
ಬೆಳಿಗ್ಗೆ ೯ ಗಂಟೆಗೆ ಕಲಶ ಪೂಜೆ, ೧೦.೩೦ ಗಂಟೆಗೆ ಗಣಪತಿ ಹೋಮ, ಮೃತ್ಯುಂಜಯ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ, ೧ ಗಂಟೆಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.