*ಗೋಣಿಕೊಪ್ಪ, ಜೂ. ೯: ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಟಿಯಾಲ ಗ್ರಾಮದಲ್ಲಿನ ನಿವಾಸಿಗಳಿಗೆ ೧೫ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿನ ಸೌಕರ್ಯಕ್ಕೆ ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಅವರು ಚಾಲನೆ ನೀಡಿದರು.

ಗ್ರಾಮದ ೧೧ ಮನೆಗಳಿಗೆ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ತಾ.ಪಂ. ಅನುದಾನದ ೭ ಲಕ್ಷ ರೂಪಾಯಿಗಳನ್ನು ಸದ್ಬಳಕೆ ಮಾಡಲಾಗಿದೆ. ಮುಂದಿನ ಹಂತದಲ್ಲಿಯೂ ಕುಡಿಯುವ ನೀರು ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿಗೆ ಬೇಡಿಕೆಗೆ ಅನುಗುಣವಾಗಿ ಅನುದಾನವನ್ನು ಒದಗಿಸಲಾಗಿದೆ. ಈ ಭಾಗದಲ್ಲಿ ಅತಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿನ ರಸ್ತೆಗಳ ಡಾಂಬರೀಕರಣ ಕಾರ್ಯವು ನಡೆದಿದೆ. ಜನರ ಬೇಡಿಕೆಗೆ ಅನುಗುಣವಾಗಿ ವಿವಿಧ ಕಾಮಗಾರಿಗಳನ್ನು ಗ್ರಾಮದಲ್ಲಿ ಅನುಷ್ಠಾನಗೊಳಿಸುವುದಾಗಿ ಶಾಸಕರು ಭರವಸೆ ನೀಡಿದರು.

ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ನೆಲ್ಲೀರ ಚಲನ್‌ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬುಟ್ಟಿಯಂಡ ಗೀತಾ ತಂಗಮ್ಮ, ಉಪಾಧ್ಯಕ್ಷ ಅಮ್ಮತ್ತೀರ ರಾಜೇಶ್, ಸದಸ್ಯರುಗಳಾದ ಅಣ್ಣಳಮಾಡ ರಾಯ್ ಚಿಣ್ಣಪ್ಪ, ಮಲ್ಲಂಗಡ ರೀನಾಶಮಿ, ಕಾಳಿ, ಸರಸ್ವತಿ, ಕಾಫಿ ಪ್ರಕೋಷ್ಠ ಅಧ್ಯಕ್ಷ ಕುಪುö್ಪಡೀರ ಪೊನ್ನು ಮುತ್ತಪ್ಪ, ಬಾಡಗರಕೇರಿ ಬೂತ್ ಅಧ್ಯಕ್ಷ ಕಾಯಪಂಡ ಮದು ಮೋಟಯ್ಯ, ಜಿ.ಪಂ. ಇಂಜಿನಿಯರ್‌ಗಳಾದ ಮಹದೇವ್, ಕಿರಿಯ ಇಂಜಿನಿಯರ್ ಒಬಯ್ಯ, ಜಲ್‌ಜೀವನ್ ಯೋಜನೆಯ ತಾಲೂಕು ಅಭಿಯಂತರ ಯೋಗೇಶ್ ಗೌಡ, ಕಿರಿಯ ಇಂಜಿನಿಯರ್ ಸುನಿಲ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ ಹಾಜರಿದ್ದರು.