ಸಿದ್ದಾಪುರ, ಜೂ. ೧೦: ಶ್ರೀ ಮುತ್ತಪ್ಪ ಯುವ ಕಲಾ ಸಂಘ ನೆಲ್ಯಹುದಿಕೇರಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆ ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಮಡಿಕೇರಿ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ತಾ. ೧೪ ರಂದು ನೆಲ್ಯಹುದಿಕೇರಿಯ ವಿ.ಎಸ್.ಎಸ್.ಎನ್. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತರು ರಕ್ತದಾನ ಮಾಡುವಂತೆ ಶ್ರೀ ಮುತ್ತಪ್ಪ ಯುವಕಲಾ ಸಂಘದ ಅಧ್ಯಕ್ಷ ಶರಣ್ ಪ್ರಕಾಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.