ಮಡಿಕೇರಿ, ಜೂ. ೯: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತಾ. ೧೧ ರಂದು ಬೆಳಿಗ್ಗೆ ೧೦.೩೦ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಚಿವೆ ಸುಮಾ ವಸಂತ್, ಯಂ.ಸಿ. ನಾಣಯ್ಯ, ಬಿ.ಎ. ಜೀವಿಜಯ, ಕೆಪಿಸಿಸಿ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.