ಕೂಡಿಗೆ, ಜೂ. ೯: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎಂ. ಪಾರ್ವತಿ ನಿವೃತ್ತಿ ಹೊಂದಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಮಾರಪ್ಪ, ಉಪಾಧ್ಯಕ್ಷ ಜಗದೀಶ್ ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.