ಸೋಮವಾರಪೇಟೆ,ಜೂ.೧೦: ತಾಲೂಕು ಒಕ್ಕಲಿಗರ ಸಂಘದ ಸುವರ್ಣ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು, ತಾ. ೧೪ರಂದು ನಡೆಯುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನೆ ನೆರವೇರಲಿದೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನೆ ನೆರವೇರಲಿದೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶಿಲಾನ್ಯಾಸ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಡಿ.ವಿ. ಸದಾನಂದಗೌಡ, ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಕೃಷ್ಣಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿಯಿತ್ತರು.
ಇದೇ ಸಂದರ್ಭ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಶಾಲಾ ಕೊಠಡಿಗಳ ಉದ್ಘಾಟನೆ, ವಾಚನಾಲಯ ಹಾಗೂ ಪ್ರಯೋಗಶಾಲೆಯ ಉದ್ಘಾಟನೆ, ಚೌಡ್ಲು ಕಾಳಮ್ಮ ಕಾಳೇಗೌಡ ಸಭಾಂಗಣದ ನೂತನ ದ್ವಾರ ಉದ್ಘಾಟನೆ ನಡೆಯಲಿದೆ. ಸಮುದಾಯ ಭವನ ನಿರ್ಮಾಣಕ್ಕೆ ಧನ ಸಹಾಯ ನೀಡಿದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ದಾನಿಗಳನ್ನು ಸನ್ಮಾನಿಸಲಾಗುವುದು ಎಂದರು.
ಸುವರ್ಣ ಮಹೋತ್ಸವ ನೆನಪಿಗಾಗಿ ಹೊರತರಲಾಗಿರುವ ಸ್ಮರಣ ಸಂಚಿಕೆಯ ಬಿಡುಗಡೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದೇ ಸಂದರ್ಭ ಕೃಷಿ
(ಮೊದಲ ಪುಟದಿಂದ) ಜೈವಿಕ ವೈವಿಧ್ಯ ಮಾಹಿತಿ ಮತ್ತು ಇತರೆ ವಸ್ತು ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು. ಸುವರ್ಣ ಮಹೋತ್ಸವ ಹಿನ್ನೆಲೆ ಈಗಾಗಲೇ ಸಮುದಾಯ ಬಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣೆ, ಪ್ರತಿಭಾ ಪುರಸ್ಕಾರ ನೆರವೇರಲಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಒಕ್ಕಲಿಗರ ಸಂಘದ ಗೌರವ ಕಾರ್ಯದರ್ಶಿ ಎನ್.ಬಿ.ಗಣಪತಿ, ಖಜಾಂಚಿ ಲಿಂಗರಾಜು, ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ಸ್ಮರಣ ಸಂಚಿಕೆ ಸಂಪಾದಕ ಕೆ.ಟಿ.ಪರಮೇಶ್, ನಿರ್ದೇಶಕ ಪಿ.ಕೆ.ರವಿ ಉಪಸ್ಥಿತರಿದ್ದರು.