ಶ್ರೀಮಂಗಲ, ಜೂ. ೧೦: ಶ್ರೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರುಗ ಗ್ರಾಮದಲ್ಲಿ ಮುಂಜಾನೆ ಕಾಡಾನೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೀರುಗ ಗ್ರಾಮದ ಹೋಮ್ ಸ್ಟೇಯೊಂದರ ಕಾರ್ಮಿಕ ಹಾಲಪ್ಪ (೫೫) ನಡೆದುಕೊಂಡು ಹೋಗುತ್ತಿದ್ದ ವೇಳೆ ಒಂಟಿ ಸಲಗ ತೋಟದಿಂದ ದಿಢೀರಾಗಿ ಎದುರಾಗಿ, ಹಾಲಪ್ಪ ಅವರ ಮೇಲೆ ದಾಳಿ ನಡೆಸಿದ ಪರಿಣಾಮ ಕೈ ಮತ್ತು ಕಾಲಿಗೆ ಗಾಯವಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಶ್ರೀಮಂಗಲ ವಲಯ ಅರಣ್ಯಾಧಿಕಾರಿ ಡಿನ್ಸಿ ದೇಚಮ್ಮ ಸಿಬ್ಬಂದಿಗಳೊAದಿಗೆ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಒದಗಿಸಿ, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿನ್ಸಿ ದೇಚಮ್ಮ ತಿಳಿಸಿದ್ದಾರೆ.

ಇಂದಿನಿAದ ಕಾರ್ಯಾಚರಣೆ

ಶ್ರೀಮಂಗಲ-ಕುಟ್ಟ ವ್ಯಾಪ್ತಿಯಲ್ಲಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆಯನ್ನು ತಾ.೧೧ ಶನಿವಾರ ಮತ್ತು ತಾ.೧೨ ಭಾನುವಾರ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೬ ಗಂಟೆವರೆಗೆ ಅರಣ್ಯ ಇಲಾಖೆಯಿಂದ ಬೀರುಗ, ಕುರ್ಚಿ, ಮಂಚಳ್ಳಿ, ಕಾಕೂರು, ಕಾಯಿಮಾನಿ, ಕುಟ್ಟ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು, ತೋಟ ಕಾರ್ಮಿಕರು, ಬೆಳೆಗಾರರು, ನಾಗರಿಕರು ಎಚ್ಚರವಹಿಸಬೇಕು. ತೋಟದಲ್ಲಿ ಬೆಳೆಗಾರರು, ಕಾರ್ಮಿಕರು ಕೆಲಸದಲ್ಲಿ ತೊಡಗಿಕೊಳ್ಳದಂತೆ ಮತ್ತು ಕಾರ್ಯಾಚರಣೆಗೆ ಸಹಕಾರ ನೀಡುವಂತೆ ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.