ಮಡಿಕೇರಿ, ಜೂ. ೧೦ : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೆ.ಬಿ ಮಹಂತೇಶ್ ಸ್ಮರಣಾರ್ಥ ವಾರ್ಷಿಕವಾಗಿ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ‘ಶಕ್ತಿ’ ಉಪ ಸಂಪಾದಕ ಕಾಯಪಂಡ ಶಶಿ ಸೋಮಯ್ಯ ಆಯ್ಕೆಯಾಗಿದ್ದಾರೆ. ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ `ಕ್ರೀಡಾ ಸಚಿವರೇ... ಜಿಲ್ಲಾ ಕ್ರೀಡಾಂಗಣದ ದುಸ್ಥಿತಿ ನೋಡುವಿರೇ...?' ಎಂಬ ವರದಿ ಆಯ್ಕೆಯಾಗಿದೆ. ೫ ಸಾವಿರ ರೂ ನಗದು ಹಾಗೂ ಪ್ರಶಸ್ತಿ ಪತ್ರ ಹೊಂದಿರುವ ಪ್ರಶಸ್ತಿಯನ್ನು ತಾ. ೧೨ ರಂದು ನಡೆಯುವ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕೊಡಗು ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ಕ್ಲಬ್ನ ಪರಿಣಾಮಕಾರಿ ವರದಿ ಪ್ರಶಸ್ತಿಯನ್ನು ಇವರು ಮೂರನೇ ಬಾರಿಗೆ ಪಡೆದುಕೊಳ್ಳುತ್ತಿದ್ದಾರೆ.
ಮಹಾಸಭೆ : ಕೊಡಗು ಪ್ರೆಸ್ಕ್ಲಬ್ ೨೦೨೧-೨೨ ನೇ ಸಾಲಿನ ಮಹಾಸಭೆಯು ತಾ. ೧೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಪ್ರಶಸ್ತಿ ವಿತರಣೆ ನಡೆಯಲಿದೆ.