ಪೊನ್ನಂಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಶಾಲಾ ಆವರಣದಲ್ಲಿ ೧೦೦ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಎಂ.ಯು. ಚಂಗಪ್ಪ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ನರಸಿಂಹ ಮೂರ್ತಿ, ಸೇವಾ ಪ್ರತಿನಿಧಿ ಗೌರಿ, ಜೀವಿತ, ಪೊನ್ನಂಪೇಟೆ ಗ್ರಾ.ಪಂ. ಸದಸ್ಯ ರಾಮಕೃಷ್ಣ ಹಾಗೂ ಶಿಕ್ಷಕ ವೃಂದ ಹಾಜರಿದ್ದರು.