ಮಡಿಕೇರಿ, ಜೂ. ೧೧: ಮಡಿಕೇರಿ ವಕೀಲರ ಸಂಘದ ವತಿಯಿಂದ ಐವರು ನೂತನ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಶಾಂತಿ ಜಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷಿö್ಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅನಿತಾ ಎನ್.ಪಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮುನಿರತ್ನಮ್ಮ ಸಿ.ಎನ್, ಅಪರ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ಎನ್.ಎ. ಇವರುಗಳನ್ನು ವಕೀಲರ ಸಂಘದ ವತಿಯಿಂದ ಸ್ವಾಗತಿಸಲಾಯಿತು. ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ. ದಯಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿನರಾಲ್ಕರ್ ಭೀಮರಾವ್ ಲಗಮಪ್ಪ ಮಾತನಾಡಿ ವಕೀಲರು ಮತ್ತು ನ್ಯಾಯಾಧೀಶರು ಪರಸ್ಪರ ಸಹಕಾರದಿಂದ ಕೆಲಸ ಮಾಡಿದಾಗ ನ್ಯಾಯಾಂಗದ ಘನತೆ ಮತ್ತು ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು. ಸಂಘದ ಉಪಾಧ್ಯಕ್ಷ ಕೆ.ಎಸ್. ತಮ್ಮಯ್ಯ, ಖಜಾಂಚಿ ಬಿ.ಸಿ. ದೇವಿಪ್ರಸಾದ್, ಜಂಟಿ ಕಾರ್ಯದರ್ಶಿ ಎಂ.ವಿ. ಸಂಜಯ್ ರಾಜ್, ಪದಾಧಿಕಾರಿ ಡಿ.ಕೆ. ರಾಜೇಶ್ ಮಾತನಾಡಿದರು. ಸಭೆಯಲ್ಲಿ ಪದಾಧಿಕಾರಿಗಳಾದ ಡಿ. ಎನ್.ಡೊಮಿನಿಕ್, ದಿವ್ಯಾ ನಂಜಪ್ಪ, ಭಾನುಪ್ರಕಾಶ್, ತಾಹ ಯಾಸೀನ್, ಚಂದನ್. ಪಿ.ಆರ್. ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸುದಯ್ ನಾಣಯ್ಯ ವಂದಿಸಿದರು.