ಮಡಿಕೇರಿ, ಜೂ. ೧೧: ಪ್ರಸಕ್ತ ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ ೬ ಪ್ರೌಢಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್ಸಿಐ ನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಾ. ೧೫ ರ ಸಂಜೆ ೪ ಗಂಟೆಯೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ. ೯೪೪೮೯೯೯೪೦೦, ೯೪೮೧೧೧೪೪೮೫, ೯೪೮೦೮೮೬೯೪೧ ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕ ವೇದಮೂರ್ತಿ ಅವರು ತಿಳಿಸಿದ್ದಾರೆ.
ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ
ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(೬ ರಿಂದ ೧೦ನೇ ತರಗತಿ)ಗಳಿಗೆ ವಾರ್ಷಿಕ ರೂ. ೧೦ ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು ೨೦೨೧ ರ ಏಪ್ರಿಲ್ ೧ ರ ನಂತರ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟಿçÃಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಅಂದರೆ ಕ್ರೀಡಾ ಪಂದ್ಯಾವಳಿಗಳಲ್ಲಿನ ೨೦೨೧ ರ ಏಪ್ರಿಲ್ ೧ ರಿಂದ ೨೦೨೨ ರ ಮಾರ್ಚ್ ೩೧ ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಮೂಲಕ ತಾ. ೩೦ ರೊಳಗೆ ಅರ್ಜಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.
ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ
ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ೨೦೨೧ನೇ ವರ್ಷದಲ್ಲಿ(೨೦೨೧ ರ ಜನವರಿ ೧ ರಿಂದ ೨೦೨೧ ರ ಡಿಸೆಂಬರ್ ೩೧ ರವರೆಗೆ) ರಾಷ್ಟಿçÃಯ, ಅಂರ್ರಾಷ್ಟಿçÃಯ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹಧನ ನೀಡಲಾಗುವುದು.
ಕರ್ನಾಟಕವನ್ನು ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ರಾಷ್ಟಿçÃಯ, ಅಂರ್ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ತಾ. ೨೫ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.