ಮಡಿಕೇರಿ, ಜೂ. ೧೧ : ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟಿçÃಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ವತಿಯಿಂದ ೨೦೨೧-೨೨ ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ತಾ. ೧೫ ರವರೆಗೆ ನಗರಸಭಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ತಾ. ೯ರಂದು ನಡೆಯಿತು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಡಿ. ನಿರ್ಮಲ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ಶಶಿಧರ್, ನಗರಸಭೆ ಸದಸ್ಯರು ಇತರರು ಇದ್ದರು.
ಸ.ಪ್ರ.ದ ಕಾಲೇಜಿನ ದೈಹಿಕ ಶಿಕ್ಷಕರಾದ ಎವರೆಸ್ಟ್ ರೊಡ್ರಿಗಸ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಎಂ.ಎನ್. ಪ್ರಕಾಶ್ ವಂದಿಸಿದರು.
ತಾ. ೧೫ ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ರವಿ ಕುಶಾಲಪ್ಪ, ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಡಿ. ನಿರ್ಮಲಾ, ನಗರಸಭೆ ಪೌರಾಯುಕ್ತ ರಾಮದಾಸ್, ನಗರಸಭೆ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಸರೋಜಿನಿ ಇತರರು ಪಾಲ್ಗೊಳ್ಳಲಿದ್ದಾರೆ.