ಕೂಡಿಗೆ, ಜೂ. ೧೦: ರೂ. ೧.೫೦ ಕೋಟಿ ವೆಚ್ಚದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ತೊರೆನೂರಿನಲ್ಲಿ ನಿರ್ಮಿಸಲಾದ ಕಾಂಕ್ರಿಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಈಗಾಗಲೇ ರೂ. ೧೭ ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿವೆ. ಇದರಲ್ಲಿ ತೊರೆನೂರು ರಸ್ತೆಯೂ ಸೇರಿದೆ.
ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮದ ಪ್ರಗತಿ ಸಾಧ್ಯ. ಈಗಾಗಲೇ ರಾಜ್ಯ ಹೆದ್ದಾರಿ ಶಿರಂಗಾಲದಿAದ ಕುಶಾಲ ನಗರದವರೆಗೆ ಉತ್ತಮವಾಗಿ ರುವುದರಿಂದ ಉಳಿದ ಉಪ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಅನುದಾನವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಎಂ.ಟಿ. ಬೇಬಿಯಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜ್, ಶಿವಕುಮಾರ್ ಸಾವಿತ್ರಿ, ತೊರೆನೂರು ಬಸವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ಕಾರ್ಯದರ್ಶಿ ಸೋಮಚಾರಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಉಪಾಧ್ಯಕ್ಷ ಜಗದೀಶ್, ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್, ಇಂಜಿನಿಯರ್ ಸತ್ಯ, ಅಭಿವೃದ್ಧಿ ಅಧಿಕಾರಿ ಡಿ. ವೀಣಾ ಸೇರಿದಂತೆ ಅನೇಕ ಮಂದಿ ಗ್ರಾಮಸ್ಥರು ಹಾಜರಿದ್ದರು.