ಕುಶಾಲನಗರ, ಜೂ. ೧೦: ಯುವಪೀಳಿಗೆ ದುಶ್ಚಟದಿಂದ ದೂರವಿದ್ದು ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ಆರೋಗ್ಯ ಇಲಾಖೆಯ ತಾಲೂಕು ಶಿಕ್ಷಣ ಅಧಿಕಾರಿ ಶಾಂತಿ ಅವರು ಕರೆ ನೀಡಿದರು.
ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಕುಶಾಲನಗರ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಆಶ್ರಯದಲ್ಲಿ ನಡೆದ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದ ಅವರು, ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವ ಮೂಲಕ ಆರೋಗ್ಯ ಸಂಪೂರ್ಣ ಕೆಡುವುದರೊಂದಿಗೆ ಇಡೀ ಕುಟುಂಬ ನಾಶ ಆಗುವ ಸಂಭವವೇ ಅಧಿಕ ಎಂದರು.
ತAಬಾಕು ಸೇವನೆ ದುಷ್ಪರಿಣಾಮದಿಂದಾಗಿ ವಿಶ್ವದಲ್ಲಿ ಪ್ರತಿ ಆರು ಸೆಕೆಂಡುಗಳ ಅವಧಿಯಲ್ಲಿ ಒಬ್ಬನ ಸಾವು ಉಂಟಾಗುತ್ತಿರುವ ಮಾಹಿತಿ ಇದೆ. ಇದು ಬಹಳ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಮೂಲಕ ಇಂತಹ ಅನಾಹುತಗಳ ಬಗ್ಗೆ ಕುಟುಂಬ ಹಾಗೂ ಸಮಾಜದಲ್ಲಿ ಅರಿವು ಜಾಗೃತಿ ಮೂಡಿಸಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಗ್ರಾಮೀಣಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಳೆದ ಹಲವು ವರ್ಷಗಳಿಂದ ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡುವ ಬಗ್ಗೆ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ಮಾಹಿತಿ ಒದಗಿಸಿದರು. ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲೆ ಲಿಖಿತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಎಂ.ಎನ್. ಚಂದ್ರಮೋಹನ್, ಯೋಜನಾಧಿಕಾರಿ ರೋಹಿತ್, ಕಾಲೇಜಿನ ಆಡಳಿತಾಧಿಕಾರಿ ಮಹೇಶ್ ಅಮೀನ್ ಇದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕ ಸೇರಿದಂತೆ ಪಿಯು, ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಾಧ್ಯಾಪಕ ಮಂಜೇಶ್ ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ರೋಹಿತ್ ಸ್ವಾಗತಿಸಿದರು. ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.