ಮಡಿಕೇರಿ, ಜೂ. ೧೧: ಮಡಿಕೇರಿ ನಗರದ ಸರ್ಕಾರ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಸಂದರ್ಭ ಕ್ಲಬ್ ಮಹೀಂದ್ರ ರೆಸಾರ್ಟ್ ವತಿಯಿಂದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿ.ಎಸ್.ಆರ್.) ಯೋಜನೆಯಡಿ ಹೊರತರಲಾದ ಬಟ್ಟೆ ಬ್ಯಾಗ್‌ಗಳನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಬಿಡುಗಡೆಗೊಳಿಸಿದರು.
ಇದೇ ವೇಳೆ ಕ್ಲಬ್ ಮಹೀಂದ್ರ ರೆಸಾರ್ಟ್ ವತಿಯಿಂದ ಪರಿಸರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಬಟ್ಟೆ ಬ್ಯಾಗ್‌ಅನ್ನು ಉಚಿತವಾಗಿ ವಿತರಿಸಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅನಿತಾ, ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ , ಡಿಡಿಪಿಐ ವೇದಮೂರ್ತಿ, ಜಿಲ್ಲಾ ಪರಿಸರ ಅಧಿಕಾರಿ ಪಿ.ಕೆ. ಉಮಾಶಂಕರ್, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮ ಕುಮಾರ್, ಡಿಸಿಎಫ್‌ಗಳಾದ ಎ.ಟಿ. ಪೂವಯ್ಯ, ಪೂರ್ಣಿಮ, ಶಿವರಾಂ ಬಾಬು, ಕಾಲೇಜಿನ ಉಪ ಪ್ರಾಂಶುಪಾಲೆ ಪಿ.ಕೆ ನಳಿನಿ, ಕ್ಲಬ್ ಮಹೀಂದ್ರ ರೆಸಾರ್ಟ್ನ ಸಂವಹನ ಅಧಿಕಾರಿಗಳಾದ ನವೀನ್, ಅರುಣ್ ಮತ್ತಿತರರು ಇದ್ದರು.