ಮಡಿಕೇರಿ, ಜೂ. ೧೨: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ, ವಸತಿ ರಹಿತ ಹಾಗೂ ಖಾಲಿ ನಿವೇಶನ, ವಸತಿ ರಹಿತ ಫಲಾನುಭವಿಗಳಿಗೆ ೨೦೨೧-೨೨ನೇ ಸಾಲಿಗೆ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ‘ಡಾ. ಅಂಬೇಡ್ಕರ್ ನಗರ ವಸತಿ ಯೋಜನೆ’ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮನೆಯನ್ನು ನಿರ್ಮಿಸಲು ಅರ್ಜಿಯನ್ನು ಸಲ್ಲಿಸಬಹುದು. ಆದ್ದರಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರು, ಖಾಲಿ ನಿವೇಶನ ಹಾಗೂ ಹಳೆಯ ಮನೆಯನ್ನು ಹೊಂದಿರುವ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಇನ್ನಿತರ ಅಗತ್ಯ ದಾಖಲೆ ಪತ್ರ ಇರುವ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದ್ದು, ಅರ್ಹ ಫಲಾನುಭವಿಗಳು ತಾ. ೧೪ರೊಳಗಾಗಿ ನಗರಸಭೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ಕೆಲಸದ ವೇಳೆಯಲ್ಲಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು.