(ಕೆ.ಎಂ ಇಸ್ಮಾಯಿಲ್ ಕಂಡಕರೆ)
ಮಡಿಕೇರಿ, ಜೂ. ೧೨: ಕೊಡಗು ಜಿಲ್ಲೆ ಕ್ರೀಡೆಯ ತವರೂರಾಗಿದೆ. ಅದರಲ್ಲೂ ಹಾಕಿ ಕ್ರೀಡೆಯಲ್ಲಿ ಕೊಡಗನ್ನು ಕರ್ನಾಟಕದ ಪಂಜಾಬ್ ಎಂದು ಕರೆಯುತ್ತೇವೆ.
ಜಿಲ್ಲೆಯಲ್ಲಿ ಹಾಕಿ ಕ್ರೀಡೆಗೆ ಅತೀ ಹೆಚ್ಚು, ಪ್ರೋತ್ಸಾಹ, ತರಬೇತಿ ನೀಡುವುದು ಸಾಮಾನ್ಯವಾಗಿದೆ. ಜಿಲ್ಲೆಯ ಹಾಕಿ ಕ್ರೀಡೆ ಅಂರ್ರಾಷ್ಟಿçÃಯ ಮಟ್ಟದಲ್ಲಿ ಗಮನ ಸೆಳೆದಿದೆ.
ಆದರೆ ಇತ್ತೀಚಿನ ದಿನಗಳಲ್ಲಿ ಹಾಕಿಯೊಂದಿಗೆ ಕೊಡಗು ಜಿಲ್ಲೆಯಲ್ಲಿ ಫುಟ್ಬಾಲ್ ಕೂಡ ಆರಂಭಗೊAಡಿದೆ. ಬರೀ ಹಾಕಿ ಕ್ರೀಡೆಗೆ ಹೆಚ್ಚಿನ ಮನ್ನಣೆ ನೀಡುತ್ತಿದ್ದ ಜಿಲ್ಲೆಯಲ್ಲಿ ಇದೀಗ ಫುಟ್ಬಾಲ್ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವುದು ಕಂಡು ಬರುತ್ತಿದೆ.
ಜಿಲ್ಲೆಯಲ್ಲಿ ಫುಟ್ಬಾಲ್ ಕ್ರೀಡೆಯನ್ನು ತಳಮಟ್ಟದಿಂದಲೇ ಬೆಳೆಸುವ ಕಾರ್ಯಕ್ಕೆ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹಾಗೂ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ಪಣತೊಟ್ಟಿದೆ. ಗ್ರಾಮೀಣ ಭಾಗದ ಫುಟ್ಬಾಲ್ ಪಟುಗಳನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿ, ರಾಜ್ಯ ಹಾಗೂ ರಾಷ್ಟçಮಟ್ಟದ ಪ್ರತಿಷ್ಠಿತ ಕ್ಲಬ್ಗಳಲ್ಲಿ ಆಡಲು ಅವಕಾಶ ಮಾಡಿಕೊಡುತ್ತಿದೆ.
ಯಶಸ್ವಿಯಾಗಿ ಮುಕ್ತಾಯಗೊಂಡ ಜಿಲ್ಲಾ ಮಟ್ಟದ ಲೀಗ್:
ಸತತವಾಗಿ ೮ ದಿನಗಳ ಮಳೆಯ ಆರ್ಭಟದ ನಡುವೆಯೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ೨೦೨೧-೨೨ ಸಾಲಿನ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ನಲ್ಲಿ ನೋಂದಣಿಯಾಗಿರುವ ಕ್ಲಬ್ಗಳ ನಡುವಿನ ಜಿಲ್ಲಾಮಟ್ಟದ ಲೀಗ್ ಫುಟ್ಬಾಲ್ ಪಂದ್ಯಾವಳಿಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದೆ.
ಕಳೆದ ವರ್ಷ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ನಲ್ಲಿ ಕೇವಲ ೧೬ ಕ್ಲಬ್ಗಳು ಮಾತ್ರ ನೋಂದಣಿ ಮಾಡಿಕೊಂಡಿತ್ತು.
ಆದರೆ ಈ ಬಾರಿ ೨೧ ಕ್ಲಬ್ಗಳು ನೋಂದಣಿ ಮಾಡಿಕೊಂಡಿದೆ. ಜಿಲ್ಲಾ ಫುಟ್ಬಾಲ್ ಲೀಗ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಜಿಲ್ಲೆಯ ಆಟಗಾರರನ್ನು ಗುರುತಿಸಿ ಮುಂದಿನ ದಿನಗಳಲ್ಲಿ ನಡೆಯುವ ಅಂತರ್ ಜಿಲ್ಲಾಮಟ್ಟದ ಕಾಲ್ಚೆಂಡು ಪಂದ್ಯಾಟದಲ್ಲಿ ಕೊಡಗು ಜಿಲ್ಲಾ ತಂಡದಲ್ಲಿ ಸ್ಥಾನ ನೀಡಲಿದ್ದಾರೆ.
ಅಂಡರ್ ೧೬ ಕಾಲ್ಚೆಂಡು ಪಂದ್ಯಾವಳಿ:
ಸೆಪ್ಟೆAಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹಾಗೂ ರಾಜ್ಯ ಫುಟ್ಬಾಲ್ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲೆಯ ಹದಿನಾರು ವಯಸ್ಸಿನ ವಯೋಮಾನದ ಫುಟ್ಬಾಲ್ ಆಟಗಾರರ ಕಾಲ್ಚೆಂಡು ಪಂದ್ಯಾವಳಿಯನ್ನು ಜಿಲ್ಲಾ ಫುಟ್ಬಾಲ್ ಸಂಸ್ಥೆಗೆ ಸೇರಿದ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಸಲು ಯೋಜನೆ ಕೈಗೊಳ್ಳಲಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ತಳಮಟ್ಟದಿಂದಲೇ ಫುಟ್ಬಾಲ್ ಆಟಗಾರರನ್ನು ಹುಟ್ಟು ಹಾಕುವ ಹೊಸ ಪ್ರಯತ್ನಕ್ಕೆ ಜಿಲ್ಲಾ ಫುಟ್ಬಾಲ್ ಸಂಸ್ಥೆ ಕೈ ಹಾಕಿದೆ.
ಬೇಬೀಸ್ ಲೀಗ್ ಫುಟ್ಬಾಲ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್ಬಾಲ್ ವೇಗವಾಗಿ ಬೆಳೆಯುತ್ತಿದೆ. ೪ ವರ್ಷದಿಂದಲೇ ಮಕ್ಕಳಿಗೆ ಫುಟ್ಬಾಲ್ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುತ್ತಾ, ರಾಜ್ಯ ಫುಟ್ಬಾಲ್ ಸಂಸ್ಥೆ ಬೇಬೀಸ್ ಲೀಗ್ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜನೆ ಮಾಡುತ್ತಿದ್ದು, ಅದೇ ಮಾದರಿಯಲ್ಲಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಮುಂದಿನ ದಿನಗಳಲ್ಲಿ ಬೇಬೀಸ್ ಲೀಗ್ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿ, ಚಿಕ್ಕ ವಯಸ್ಸಿನಲ್ಲೇ ಫುಟ್ಬಾಲ್ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಮುಂದಾಗಿದೆ.
ತೀರ್ಪುಗಾರರಿಗೆ ವಿಶೇಷ ತರಬೇತಿ:ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಫುಟ್ಬಾಲ್ ತೀರ್ಪುಗಾರರಿಗೆ, ಜಿಲ್ಲಾ ಸಂಸ್ಥೆಯ ವತಿಯಿಂದ ವಿಶೇಷ ತೀರ್ಪುಗಾರರ ತರಬೇತಿಯನ್ನು ನೀಡಲು ಜಿಲ್ಲಾ ಫುಟ್ಬಾಲ್ ಸಂಸ್ಥೆ ಹಾಗೂ ರಾಜ್ಯ ಫುಟ್ಬಾಲ್ ಸಂಸ್ಥೆ ಮುಂದಾಗಿದ್ದು, ಫುಟ್ಬಾಲ್ ತೀರ್ಪುಗಾರಿಕೆಯ ಬಗ್ಗೆ ಆಸಕ್ತಿಯಿರುವ ಜಿಲ್ಲೆಯ ಫುಟ್ಬಾಲ್ ಆಟಗಾರರಿಗೆ ಫುಟ್ಬಾಲ್ ತೀರ್ಪುಗಾರಿಕೆಯ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ.
ಅಲ್ಲದೇ ಇದುವರೆಗೆ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮೂವರು ತೀರ್ಪುಗಾರರಾದ ಇಬ್ರಾಹಿಂ ಸುಂಟಿಕೊಪ್ಪ, ದರ್ಶನ್ ಮರಗೋಡು ಹಾಗೂ ಧೀರಜ್ ರೈ ಅವರು ರಾಷ್ಟçಮಟ್ಟದ ಫುಟ್ಬಾಲ್ ತೀರ್ಪುಗಾರರ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ.
ಐದು ಜನರ ಫುಟ್ಬಾಲ್ ಆಟಕ್ಕೆ ಕಡಿವಾಣ:
ಜಿಲ್ಲೆಯಲ್ಲಿ ಸೂಪರ್ ಫೈವ್ಸ್ (ಐದು ಜನರ ಫುಟ್ಬಾಲ್ ಆಟ) ಕಾಲ್ಚೆಂಡು ಪಂದ್ಯಾವಳಿಗಳು ಹೆಚ್ಚಾಗಿ ನಡೆಯುತ್ತಿದೆ. ಆದರೆ ಇದರಿಂದ ಫುಟ್ಬಾಲ್ ಆಟಗಾರರು ಬೇಗ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಐದು ಜನರ ಫುಟ್ಬಾಲ್ ಆಟಕ್ಕೆ ಕಡಿವಾಣ ಹಾಕಲು ಜಿಲ್ಲಾ ಫುಟ್ಬಾಲ್ ಸಂಸ್ಥೆ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದೆ ಹಾಗೂ ಜಿಲ್ಲೆಯ ಎಲ್ಲಾ ಕ್ಲಬ್ಗಳು ಹನ್ನೊಂದು ಜನರ ಫುಟ್ಬಾಲ್ ಕ್ರೀಡಾಕೂಟವನ್ನು ನಡೆಸಬೇಕೆಂದು ಜಿಲ್ಲಾ ಫುಟ್ಬಾಲ್ ಸಂಸ್ಥೆ ಎಲ್ಲಾ ಕ್ಲಬ್ ಗಳಿಗೆ ಸೂಚನೆ ನೀಡಿದೆ.