ಮಡಿಕೇರಿ, ಜೂ. ೧೨: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಶೀಘ್ರದಲ್ಲೇ ಪತ್ರಕರ್ತರಿಗಾಗಿ ಸಹಕಾರಿ ಸಂಘ ಸ್ಥಾಪನೆಯಾಗಲಿದೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಪ್ರೆಸ್ ಕ್ಲಬ್ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಶ್ರೇಯೋಭಿವೃದ್ಧಿ ಗಾಗಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ. ಈ ಸಂಘದಲ್ಲಿ ಒಬ್ಬರು ೫ ಲಕ್ಷದವರೆಗೆ ಷೇರು ಹಾಕಬಹುದಾಗಿದೆ. ಸದ್ಯ ಪ್ರೆಸ್ಕ್ಲಬ್ನ ಮಡಿಕೇರಿ, ಜೂ. ೧೨: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಶೀಘ್ರದಲ್ಲೇ ಪತ್ರಕರ್ತರಿಗಾಗಿ ಸಹಕಾರಿ ಸಂಘ ಸ್ಥಾಪನೆಯಾಗಲಿದೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಪ್ರೆಸ್ ಕ್ಲಬ್ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಶ್ರೇಯೋಭಿವೃದ್ಧಿ ಗಾಗಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ. ಈ ಸಂಘದಲ್ಲಿ ಒಬ್ಬರು ೫ ಲಕ್ಷದವರೆಗೆ ಷೇರು ಹಾಕಬಹುದಾಗಿದೆ. ಸದ್ಯ ಪ್ರೆಸ್ಕ್ಲಬ್ನ ಈಗಾಗಲೇ ಸಿದ್ಧಪಡಿಸಲಾಗಿದೆ. ಚೆಂಬು ಗ್ರಾಮವನ್ನು ಹೊರತುಪಡಿಸಿ ಉಳಿದ ಪ್ರದೇಶದ ಪ್ರೆಸ್ಕ್ಲಬ್ ಸದಸ್ಯರು ಷೇರು ಹಾಕಬಹುದಾಗಿದೆ. ಸದಸ್ಯರು ಹೆಚ್ಚು ಪಾಲು ಹಣ ಹಾಕುವ ಮೂಲಕ ಸಹಕಾರಿ ಸಂಘದ ಯಶಸ್ವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಳೆದ ಒಂದು ವರ್ಷದ ಅವಧಿಯಲ್ಲಿ
(ಮೊದಲ ಪುಟದಿಂದ) ಪ್ರೆಸ್ಕ್ಲಬ್ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದೆ. ಈ ಹಿಂದಿನ ಸಭೆಯಲ್ಲಿ ಚರ್ಚೆಯಾದಂತೆ ಛಾಯಾಗ್ರಾಹಕ ರಾಗಿದ್ದ ದಿ.ಜೀವನ್ ಪಾಲಕ್ಕಾಡ್, ದಿ. ನಂದಾ ಗುಜ್ಜಾರ್ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದ್ದು, ಆ.೧೯ರಂದು ಫೋಟೋಗ್ರಫಿ ಡೇ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕ್ಲಬ್ ಸದಸ್ಯರು ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರೆಸ್ಕ್ಲಬ್ಗಳ ವಿಭಿನ್ನ ಕಾರ್ಯಕ್ರಮ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟಿçÃಯ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಪೊನ್ನೇಟಿ, ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ಟಿ.ಎನ್. ಮಂಜುನಾಥ್, ಜಿಲ್ಲಾಧ್ಯಕ್ಷರು ಹಾಗೂ ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿ ವಿಜೇತರಾದ ಬಿ.ಆರ್. ಸವಿತಾ ರೈ, ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಎನ್. ಚಂದ್ರಮೋಹನ್, ವೀರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ರೆಜಿತ್ ಕುಮಾರ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ಕಳೆದ ಸಾಲಿನ ಪತ್ರಕರ್ತರ ಸಂಘದ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕೆ.ಆರ್. ಪ್ರಸಿನ್, ಕೆ.ಎಂ ವಿನೋದ್, ನವೀನ್ ಸುವರ್ಣ, ಎಂ.ಎA. ಚನ್ನನಾಯಕ್, ಎಚ್.ಕೆ. ಜಗದೀಶ್, ಕಾಯಪಂಡ ಶಶಿ ಸೋಮಯ್ಯ, ಜಗದೀಶ್ ಜೋಡುಬೀಟಿ, ಬಾಚರಣಿಯಂಡ ಅನು ಕಾರ್ಯಪ್ಪ, ಶಿವರಾಜ್ ಅವರನ್ನು ಸನ್ಮಾನಿಸಲಾಯಿತು.
ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಕಳೆದ ಸಾಲಿನ ಮಹಾಸಭೆ ವರದಿ ಹಾಗೂ ವಾರ್ಷಿಕ ವರದಿ ವಾಚಿಸಿದರು. ಖಜಾಂಚಿ ಬೊಳ್ಳಜಿರ ಬಿ. ಅಯ್ಯಪ್ಪ ಲೆಕ್ಕಪತ್ರ ಮಂಡಿಸಿದರು. ಹಿರಿಯ ಉಪಾಧ್ಯಕ್ಷ ಸುಬ್ರಮಣಿ ಸ್ವಾಗತಿಸಿದರೆ, ಸಂಘಟನಾ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್ ವಂದಿಸಿದರು.
ಪ್ರೆಸ್ ಕ್ಲಬ್ ಉಪಾಧ್ಯಕ್ಷ ತೇಜಸ್ ಪಾಪಯ್ಯ, ನಿರ್ದೇಶಕರಾದ ಪುತ್ತಂ ಪ್ರದೀಪ್, ಕುಪ್ಪಂಡ ದತ್ತಾತ್ರಿ, ನವೀನ್ ಡಿಸೋಜ, ದಿವಾಕರ್, ಭಾಸ್ಕರ್, ವಿಶ್ವ ಕುಂಬೂರು, ಪ್ರಸೀನ್ ಉಪಸ್ಥಿತರಿದ್ದರು.