*ಗೋಣಿಕೊಪ್ಪ, ಜೂ.೧೩: ಆe಼Áದಿ ಕ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವೀರಾಜಪೇಟೆ ಮಹಿಳಾ ಮೋರ್ಚಾದ ವತಿಯಿಂದ ಸರ್ಕಾರದ ಸವಲತ್ತುಗಳನ್ನು ಪಡೆದ ಮಹಿಳಾ ಫÀಲಾನುಭವಿಗಳ ಸಮಾವೇಶ ನಡೆಸಲಾಯಿತು.

ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಹಿಳೆಯರು ಆರ್ಥಿಕವಾಗಿ ಸದೃಢÀ ರಾಗಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ಕುಟುಂಬದ ಆರ್ಥಿಕ ಸ್ಥಿತಿ ಸುದಾರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ರಾಗಬೇಕೆಂದು ಕರೆ ನೀಡಲಾಯಿತು.

ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತಾ ಬೋಜಪ್ಪ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ಮಂಡಲದ ಅಧÀ್ಯಕ್ಷ ನೆಲ್ಲಿರ ಚಲನ್‌ಕುಮಾರ್, ಉಪಾಧÀ್ಯಕ್ಷ ಕುಪ್ಪಂಡ ಗಿರೀಶ್, ರಾಜ್ಯ ಶಿಸ್ತು ಸಮಿತಿ ಸದಸ್ಯೆ ರೀನ ಪ್ರಕಾಶ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೂರೇರ ರತಿ ಅಚ್ಚಪ್ಪ, ಶಿಲ್ಪ, ಕಾರ್ಯದರ್ಶಿ ಬೋಜಮ್ಮ, ಉಪಾಧ್ಯಕ್ಷೆ ಸೀತಮ್ಮ ಹಾಗೂ ಸಮಿತಿ ಪದಾಧಿಕಾರಿಗಳು ಇದ್ದರು.