ಮಡಿಕೇರಿ, ಜೂ. ೧೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ವತಿಯಿಂದ ನೆಲ್ಲಿಹುದಿಕೇರಿ ಮುತ್ತಪ್ಪ ಯುವ ಕಲಾ ಸಂಘ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವು ತಾ. ೧೪ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನೆಲ್ಲಿಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.