ಕೂಡಿಗೆ, ಜೂ. ೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ಸೋಮವಾರಪೇಟೆ ಪತಂಜಲಿ ಆರೋಗ್ಯ ಕೇಂದ್ರದ ವತಿಯಿಂದ ವಿತರಣೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಎಸ್. ರವಿ, ಶಾಲಾ ಮುಖ್ಯೋಪಾಧ್ಯಾಯ ದುರ್ಗೆಶ್, ಯುವಕ ಸಂಘದ ಮಾಜಿ ಅಧ್ಯಕ್ಷ ಗಿರೀಶ್, ಸದಸ್ಯ ನವೀನ್ ಪತಂಜಲಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರಕಾAತ್ ಶಾಲಾ ಶಿಕ್ಷಕರ ವೃಂದ ಹಾಜರಿದ್ದರು. ೧೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ವಾತಂತ್ರö್ಯ ಹೋರಾಟಗಾರ ಮುಖಪುಟದಲ್ಲಿ ಭಾವಚಿತ್ರವಿರುವ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.