ರಾಹುಲ್ ಗಾಂಧಿ ವಿಚಾರಣೆ : ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ, ಜೂ. ೧೩: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ ಎರಡೂವರೆ ಗಂಟೆ ವಿಚಾರಣೆ ಮಾಡಿದರು. ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಬೆಂಬಲಿಗರೊAದಿಗೆ ಆಗಮಿಸಿದ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದರು. ಈ ನಡುವೆ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ಶಾಂತಿನಗರದಲ್ಲಿರುವ ಇಡಿ (ಜಾರಿ ನಿರ್ದೇಶನಾಲಯ) ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಡಿ.ಕೆ. ಸುರೇಶ್ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದರು. ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು ೭ ಕಿ.ಮೀ. ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು.
ಶ್ರೀ ಗೋವಿಂದ ದೇವಾಲಯ ಲೋಕಾರ್ಪಣೆ ಮಾಡಲಿರುವ ರಾಷ್ಟçಪತಿಗಳು!
ಬೆಂಗಳೂರು, ಜೂ. ೧೩: ಬೆಂಗಳೂರಿನ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂರ್ರಾಷ್ಟಿçÃಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯವನ್ನು ಭಾರತದ ರಾಷ್ಟçಪತಿ ರಾಮ್ ನಾಥ್ ಕೋವಿಂದ್ ಅವರು ತಾ. ೧೪ರಂದು ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯ ಡಿ.ಕೆ ಸುರೇಶ್, ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸದಸ್ಯ ಎಂ. ಕೃಷ್ಣಪ್ಪ ಅವರೂ ಸೇರಿದಂತೆ ಇತರ ಗಣ್ಯರು ಈ ವಿಶೇಷ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಲಾ ಕೆತ್ತನೆಯಿಂದ ಕೂಡಿದ ದೇವಾಲಯದ ಈ ಪಾರಂಪರಿಕ ವಿಗ್ರಹವು ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದ ಮೂರ್ತಿಯನ್ನು ಹೋಲುತ್ತದೆ. ಅಳತೆ, ಶಿಲಾ ಕೆತ್ತನೆ ಹಾಗೂ ಸೌಂದರ್ಯ ಎಲ್ಲವೂ ಒಂದೇ ರೀತಿಯೇ ಕಾಣುತ್ತದೆ. ಶ್ರೀ ಶ್ರೀನಿವಾಸ ಸ್ವಾಮಿಯ ಎತ್ತರವೂ ಕೂಡ ಒಂದೇ ಇದೆ. ಈ ಹಿನ್ನೆಲೆಯಲ್ಲಿ ಈ ದೇವರನ್ನು ರಾಜಾಧಿರಾಜ ಶ್ರೀ ಗೋವಿಂದ ಎಂದು ಕರೆಯಲಾಗುತ್ತದೆ. ಈ ದೇವಾಲಯದಲ್ಲಿ ಮಕ್ಕಳಿಗೆ, ಯುವಕರಿಗೆ ಹಾಗೂ ಕುಟುಂಬಗಳಿಗೆ ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಶಿಕ್ಷಣ ಒದಗಿಸುವ ಸೌಲಭ್ಯಗಳಿವೆ. ರಾಜಾಧಿರಾಜ ಶ್ರೀ ಗೋವಿಂದ ರಾಜ ಸ್ವಾಮಿ ಮತ್ತು ಇತರೆ ದೇವರುಗಳ ಸುಗಮ ದರ್ಶನ ಪಡೆಯುವ ಸಲುವಾಗಿ ಸಾಲಾಗಿ ತೆರಳಲು ವಿಶಾಲ ನಿರೀಕ್ಷಣಾ ಭವನವಿದೆ. ಭಕ್ತಾಧಿಗಳ ಅನುಕೂಲಕ್ಕಾಗಿ ಸಾಮೂಹಿಕ ಭೋಜನ ವ್ಯವಸ್ಥೆ ಕಲ್ಪಿಸುವ ಉಚಿತ ಅನ್ನದಾನ ಸಭಾ ಗೃಹವೂ ಇದೆ. ದಾನಿಗಳು ಹಾಗೂ ಪೋಷಕರ ಉದಾರ ಕೊಡುಗೆಯಿಂದ ಈ ದೇವಾಲಯ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಈ ದೇವಾಲಯಕ್ಕೆ ಆಗಸ್ಟ್ ೧ ರಿಂದ ಸಾರ್ವಜನಿಕರಿಗೆ ಪ್ರವೇಶಾವಕಾಶ ಒದಗಿಸಿ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ.
೨೦೦ಕ್ಕೂ ಹೆಚ್ಚು ಮಂದಿ ಬಂಧನ : ಡಿಜಿಪಿ
ಕೋಲ್ಕತ್ತಾ, ಜೂ. ೧೩: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪಶ್ಚಿಮ ಬಂಗಾಳ ಡಿಜಿಪಿ ಮನೋಜ್ ಮಾಳವೀಯ ಅವರು ಸೋಮವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಸಾಚಾರಕ್ಕೆ ಸಂಬAಧಿಸಿದAತೆ ರಾಜ್ಯದ ವಿವಿಧ ಭಾಗಗಳಿಂದ ೨೦೦ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ೪೨ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಶುಕ್ರವಾರ ಹೌರಾ ಮತ್ತು ಮುರ್ಷಿದಾಬಾದ್ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಈ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಪ್ರವಾದಿ ಮೊಹಮ್ಮದ್ ಕುರಿತು ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಹೌರಾದ ಕೆಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಶಾಲೆ ವಿರುದ್ಧ ಪ್ರಕರಣ
ಮಂಗಳೂರು, ಜೂ. ೧೩: ತಾಯಿಯೊಂದಿಗೆ ಫೋನ್ನಲ್ಲಿ ಮಾತನಾಡಲು ಅವಕಾಶ ನೀಡದ್ದಕ್ಕೆ ನೊಂದ ೯ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದÀ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ನಲ್ಲಿ ನಡೆದಿದೆ. ೯ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (೧೪) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಶನಿವಾರ ಆತನ ತಾಯಿಯ ಹುಟ್ಟುಹಬ್ಬ ಇತ್ತು. ಈ ವೇಳೆ ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯೊAದಿಗೆ ಫೋನ್ ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಅವಕಾಶ ನೀಡಿಲ್ಲ. ಇದರಿಂದ ಪೂರ್ವಜ್ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ. ತಾಯಿಯೊಂದಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ತೀವ್ರವಾಗಿ ನೊಂದಿದ್ದ ಪೂರ್ವಜ್ ಜೂನ್ ೧೧ ರಂದು ಮಧ್ಯರಾತ್ರಿ ೧೨ ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೇ ಹಾಸ್ಟಲ್ನಲ್ಲಿಯೇ ಇದ್ದ ಇತರೆ ವಿದ್ಯಾರ್ಥಿಗಳು ವಿಚಾರ ತಿಳಿದು ಹಾಸ್ಟೆಲ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಾಸ್ಟೆಲ್ ಸಿಬ್ಬಂದಿ ಬಾಲಕನ ಸಂಬAಧಿಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಹಾಸ್ಟೆಲ್ಗೆ ಬಂದ ಪೂರ್ವಜ್ ತಾಯಿ, ತಮ್ಮ ಮಗನಿಗೆ ಹಾಸ್ಟೆಲ್ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದಾಖಲಾತಿ ಸಂದರ್ಭದಲ್ಲಿ ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಗಮನಿಸುವುದಾಗಿ ಭರವಸೆ ನೀಡಿದ್ದರು. ಆದರೀಗ ತಮ್ಮ ಕರ್ತವ್ಯ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ನನ್ನ ಮಗನೊಂದಿಗೆ ಮಾತನಾಡಲು ಶಾಲೆಯ ಅಧಿಕಾರಿಗಳು ಅವಕಾಶ ನೀಡುತ್ತಿರಲಿಲ್ಲ ಎಂದು ಬಾಲಕನ ತಾಯಿ ಆರೋಪಿಸಿದ್ದಾರೆ. ಈ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.