ಮಡಿಕೇರಿ, ಜೂ. ೧೩ : ತಾ. ೧೬ ಮತ್ತು ೧೭ ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನದಂತೆ ನಡೆಸಲು ಅಗತ್ಯ ಕ್ರಮವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಂಬAಧ ವೀಡಿಯೋ ಸಂವಾದ ನಡೆದ ನಂತರ ಅಧಿಕಾರಿಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಸಿಇಟಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಸುಸೂತ್ರವಾಗಿ ಸಿಇಟಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಮುನ್ನೆಚ್ಚರಿಕೆÀ ಕ್ರಮ ವಹಿಸುವಂತೆ ಡಾ. ಬಿ.ಸಿ. ಸತೀಶ ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪುಟ್ಟರಾಜು ಮಾತನಾಡಿ ಜಿಲ್ಲಾ ಕೇಂದ್ರ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (೮೬೪ ವಿದ್ಯಾರ್ಥಿಗಳು) ಮತ್ತು ನಗರದ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು (೨೪೦ ವಿದ್ಯಾರ್ಥಿಗಳು) ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು ೧೧೦೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ತಾ. ೧೬ ರಂದು ಬೆಳಿಗ್ಗೆ ೧೦.೩೦ ರಿಂದ ೧೧.೫೦ ಗಂಟೆ ವರೆಗೆ ಜೀವಶಾಸ್ತç ಮತ್ತು ಮಧ್ಯಾಹ್ನ ೨.೩೦ ರಿಂದ ೩.೫೦ ಗಂಟೆವರೆಗೆ ಗಣಿತ, ತಾ. ೧೭ ರಂದು ಬೆಳಿಗ್ಗೆ ೧೦.೩೦ ರಿಂದ ೧೧.೫೦ ಗಂಟೆ ವರೆಗೆ ಭೌತಶಾಸ್ತç ಮತ್ತು ಮಧ್ಯಾಹ್ನ ೨.೩೦ ರಿಂದ ೩.೫೦ ಗಂಟೆ ವರೆಗೆ ರಸಾಯನಶಾಸ್ತç ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಜಿಲ್ಲಾ ಖಜಾನಾಧಿಕಾರಿ ಪಿ.ಪದ್ಮಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ, ನಗರದ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಮನ್ ಮತ್ತಿತರರಿದ್ದರು.