ಮಡಿಕೇರಿ: ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ಮಡಿಕೇರಿ ವಲಯ ಸಾಮಾಜಿಕ ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮೂರ್ನಾಡು ಸಮೀಪದ ವಾಟೇಕಾಡು ಪ್ರದೇಶದ ಕಾವೇರಿ ನದಿದಂಡೆಯಲ್ಲಿ ಅರಣ್ಯ ಬೀಜಗಳ ಬಿತ್ತೋತ್ಸವವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

"ಬಿತ್ತೋತ್ಸವ" ಕಾರ್ಯಕ್ರಮದಲ್ಲಿ ವಾಟೇಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್‌ನ ಮಕ್ಕಳು, ಶಾಲಾ ಶಿಕ್ಷಕರು, ಸಾರ್ವಜನಿಕರು, ಪರಿಸರ ಪ್ರೇಮಿಗಳು ಭಾಗವಹಿಸಿದ್ದರು.

ಜಿಲ್ಲಾ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಪೂರ್ಣಿಮಾ, ವನ್ಯ ಸಂಪತ್ತು ಹಾಗೂ ಪರಿಸರ ಸಂರಕ್ಷಣೆಗಾಗಿ ನಾವು ಅರಣ್ಯ ಪ್ರದೇಶದಲ್ಲಿ ಹೆಚ್ಚೆಚ್ಚು ಬಿತ್ತನೆ ಬೀಜಗಳನ್ನು ನಾಟಿ ಮಾಡಲಾಗುತ್ತಿದೆ. ಇಂತÀಹ ಪರಿಸರ ಕಾರ್ಯಕ್ರಮಗಳಿಗೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

ಮಡಿಕೇರಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಯೂರ್ ಕಾರವೇಕರ ಮಾತನಾಡಿ, ಪರಿಸರ ಸಮತೋಲನಕ್ಕಾಗಿ ನಾವು ನಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಉಪವಲಯ ಅರಣ್ಯಾಧಿಕಾರಿ ಎಂ.ಜಿ. ದರ್ಶಿನಿ, ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಕಿತ್ತೂರು ರಾಣಿ ಚೆನ್ನಮ್ಮನ ವಂಶಜರಾದ ಕಮಲಾಕ್ಷಿ ಹೊಂಗಲ್, ಪರಿಸರವಾದಿಗಳಾದ ಕಸ್ತೂರಿ ಬಸರಿಕೋಡ, ನೇತ್ರಾ ಕಾರವೇಕರ, ಶಾಲೆಯ ಮುಖ್ಯ ಶಿಕ್ಷಕಿ ದಮಯಂತಿ, ನಿಸರ್ಗ ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಸರಿತಾ, ಶಿಕ್ಷಕರು, ವಿದ್ಯಾರ್ಥಿಗಳು, ಸ್ವಯಂ ಸೇವಕರು ಮತ್ತು ಅರಣ್ಯ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.

ವಾಟೇಕಾಡಿನ ಕಾವೇರಿ ನದಿಪಾತ್ರದಲ್ಲಿ ನೆಲ್ಲಿ, ಬಿದಿರು, ಮುತ್ತುಗಾ, ಹಲಸು, ಸೀತಾಫಲ ಹಾಗೂ ಇನ್ನಿತರ ಕಾಡು ಜಾತಿಯ ಅರಣ್ಯ ಬಿತ್ತನೆ ಬೀಜಗಳನ್ನು ನಾಟಿ ಮಾಡಲಾಯಿತು.

ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆ