ಮಡಿಕೇರಿ, ಜೂ. ೧೫: ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಾ. ೧೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಡಿಕೇರಿ ಉಪ ವಿಭಾಗದ ಭಾಗಮಂಡಲ ಗ್ರಾಮ ಪಂಚಾಯಿತಿ ಸಭಾಂಗಣ, ಗೋಣಿಕೊಪ್ಪ ಉಪ ವಿಭಾಗದ ಕುಟ್ಟ ಗ್ರಾಮ ಪಂಚಾಯಿತಿ ಸಭಾಂಗಣ, ವೀರಾಜಪೇಟೆ ಉಪ ವಿಭಾಗದ ಅಮ್ಮತ್ತಿ ಗುಡ್ಶೆಪರ್ಡ್ ಕಮ್ಯೂನಿಟಿ ಹಾಲ್, ಕುಶಾಲನಗರ ಉಪ ವಿಭಾಗದ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಸಭಾಂಗಣ, ಗರ್ವಾಲೆ ಕಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆ ಉಪ ವಿಭಾಗದ ದೊಡ್ಡಕೊಡ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ.
ಈ ವ್ಯಾಪ್ತಿಯ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.