ಕೂಡಿಗೆ, ಜೂ. ೧೪: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎಂ. ಪಾರ್ವತಿ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ ಕುಮಾರಪ್ಪ, ಉಪಾಧ್ಯಕ್ಷ ಜಗದೀಶ್ ಸೇರಿದಂತೆ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.