ಸೋಮವಾರಪೇಟೆ, ಜೂ. ೧೪: ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯ ನಗರ ರಾಜ್ಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬವೊAದು ಮುರಿದು ಬಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿ ಬದಿಯಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬವು ಕಳೆದೆರಡು ವರ್ಷಗಳ ಹಿಂದೆ ಸುರಿದ ಭಾರೀ ಗಾಳಿ ಮಳೆಗೆ ಮುರಿದು ಬಿದ್ದಿದ್ದು, ನೂತನವಾಗಿ ಕಂಬವನ್ನು ಅಳವಡಿಸಿರುವ ಸೆಸ್ಕ್ ಹಳೆಯ ಕಂಬವನ್ನು ತೆರವುಗೊಳಿಸದೆ ಅಪಾಯಕ್ಕೆ ಆಹ್ವಾನ ನೀಡಿದೆ.

ರಾಜ್ಯ ಹೆದ್ದಾರಿಗೆ ಒತ್ತಿಕೊಂಡAತೆ ವಿಜಯನಗರ ಗ್ರಾಮವಿದ್ದು, ರಸ್ತೆಯ ಒಂದು ಬದಿಯಲ್ಲಿ ಸೌದೆಗಳನ್ನು ಶೇಖರಿಸಿಡಲಾಗಿದೆ. ಭಾರೀ ವಾಹನಗಳು ತೆರಳುವ ಸಂದರ್ಭ ರಸ್ತೆ ಬದಿಯಲ್ಲಿ ಸ್ಥಳಾವಕಾಶವಿಲ್ಲದೇ ಸಮಸ್ಯೆಯಾಗುತ್ತಿದೆ. ಇದರೊಂದಿಗೆ ಮುರಿದು ಬಿದ್ದಿರುವ ವಿದ್ಯುತ್ ಕಂಬವೂ ಇರುವುದರಿಂದ ಅಪಾಯದ ಮುನ್ಸೂಚನೆ ನೀಡುತ್ತಿದೆ ಎಂದು ಮಾದಾಪುರದ ಲಕ್ಷö್ಮಣ್ ಅಭಿಪ್ರಾಯಿಸಿದ್ದಾರೆ.

ಸೆಸ್ಕ್ ವಿದ್ಯುತ್ ಕಂಬವನ್ನು ತೆರವುಗೊಳಿಸುವಲ್ಲಿ ನಿರ್ಲಕ್ಷö್ಯ ತೋರುತ್ತಿದೆ. ಸಂಬAಧಿಸಿದ ಗ್ರಾಮ ಪಂಚಾಯಿತಿ ಸಹ ತನಗೂ ಇದಕ್ಕೂ ಸಂಬAಧವಿಲ್ಲ ಎಂಬ ಮನೋಭಾವನೆಯಲ್ಲಿದೆ. ಲೋಕೋಪಯೋಗಿ ಇಲಾಖೆಯೂ ಈ ಬಗ್ಗೆ ಗಮನಹರಿಸುತ್ತಿಲ್ಲ. ತಕ್ಷಣ ಸಂಬAಧಿಸಿದವರು ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.