ಸೋಮವಾರಪೇಟೆ, ಜೂ. ೧೫: ಲೋಕೋಪಯೋಗಿ ಇಲಾಖೆ ವತಿಯಿಂದ ರೂ. ೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೋಮವಾರ ಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ೪೩೦ ಮೀಟರ್ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಕಳೆದ ಸಾಲಿನಲ್ಲಿ ವಿವೇಕಾನಂದ ವೃತ್ತದಿಂದ ಆಲೇಕಟ್ಟೆ ಖಬರಸ್ಥಾನ ದವರೆಗೆ ಕಾಂಕ್ರಿಟ್ ರಸ್ತೆ ನಿರ್ಮಿಸ ಲಾಗಿತ್ತು. ಈ ಸಾಲಿನಲ್ಲಿ ೪೩೦ ಮೀಟರ್ ಹೆಚ್ಚುವರಿ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲಾಗಿದೆ. ರಾಜ್ಯ ಸರ್ಕಾರವು ಕೊಡಗಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುತ್ತಿದೆ. ಕಾಮಗಾರಿ ನಡೆಯುವ ಸಂದರ್ಭ ಸಾರ್ವಜನಿಕರು ಗುಣಮಟ್ಟದ ಬಗ್ಗೆ ಗಮನಹರಿಸ ಬೇಕು ಎಂದು ಶಾಸಕರು ಹೇಳಿದರು.

ಈ ಸಂದರ್ಭ ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಹೆಚ್.ಕೆ. ಗಂಗಾಧರ್, ಚೌಡ್ಲು ಗ್ರಾ.ಪಂ. ಸದಸ್ಯರುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.