ಪೊನ್ನಂಪೇಟೆ, ಜೂ. ೧೪: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಕಳೆದ ೧೫ ವರ್ಷಗಳಿಂದ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್. ಗಂಗಮ್ಮ ಅವರು ತಿತಿಮತಿ ಸಮೀಪದ ದೇವರಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಹೊಂದಿದ್ದಾರೆ. ಬಡ್ತಿ ಹೊಂದಿದ ಶಿಕ್ಷಕಿ ಗಂಗಮ್ಮ ಅವರನ್ನು ಕರ್ನಾಟಕ ಪಬ್ಲಿಕ್ ಶಾಲೆಯ ವತಿಯಿಂದ ಸನ್ಮಾನಿಸಿ, ದೇವರಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಹೊಂದಿದ್ದಾರೆ. ಬಡ್ತಿ ಹೊಂದಿದ ಶಿಕ್ಷಕಿ ಗಂಗಮ್ಮ ಅವರನ್ನು ಕರ್ನಾಟಕ ಪಬ್ಲಿಕ್ ಶಾಲೆಯ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.
ಈ ಸಂದರ್ಭ ಮುಖ್ಯ ಶಿಕ್ಷಕ ಬಿ.ಎಂ. ವಿಜಯ್, ಸಿ.ಆರ್.ಪಿ. ತಿರುನೆಲ್ಲಿಮಾಡ ಜೀವನ್, ಶಿಕ್ಷಕವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.