ಮಡಿಕೇರಿ, ಜೂ. ೧೪ : ಕೊಡಗು ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲೂಕು ಪಂಚಾಯಿತಿ ಮತ್ತು ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಹೊದ್ದೂರು ಗ್ರಾಮ ಪಂಚಾಯಿತಿ ಕಚೇರಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವು ತಾ.೧೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಹೊದ್ದೂರು ಗ್ರಾ.ಪಂ. ಅಧ್ಯಕ್ಷೆ ಪಿ.ಎ. ಕುಸುಮಾವತಿ, ಜಿ.ಪಂ. ಆಡಳಿತಾಧಿಕಾರಿ ವಿ. ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಜಿ.ಪಂ. ಉಪಕಾರ್ಯದರ್ಶಿ ಪಿ.ಲಕ್ಷಿö್ಮ, ಮಡಿಕೇರಿ ತಾ.ಪಂ. ಆಡಳಿತಾಧಿಕಾರಿ ಶಬಾನಾ ಎಂ. ಶೇಖ್, ತಾ.ಪಂ .ಇಒ ಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.