ಮಡಿಕೇರಿ, ಜೂ. ೧೫: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಗೆ ಸಂಬAಧಿಸಿದAತೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ತಾ. ೧೬ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.