ಕೂಡಿಗೆ, ಜೂ. ೧೪: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿಶ್ವಾಸ ನಿರ್ಣಯ ಮಂಡನೆಯು ಇಂದು ನಿಗದಿಯಾಗಿತ್ತು. ಜಿಲ್ಲಾ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರ ಅಧ್ಯಕ್ಷತೆಯಲ್ಲಿ ಶಿರಂಗಾಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು.

ಈ ಸಂದರ್ಭ ಅವಿಶ್ವಾಸ ನಿರ್ಣಯ ಮಂಡನೆಗೆ ಹೈಕೋರ್ಟ್ ಮೂಲಕ ಪಡೆದ ತಡೆಯಾಜ್ಞೆ ಪ್ರತಿಯನ್ನು ಅಧ್ಯಕ್ಷೆ ಭಾಗೀರತಿ ಸಲ್ಲಿಸಿದ ಮೇರೆಗೆ ಅವಿಶ್ವಾಸ ನಿರ್ಣಯ ಮಂಡನೆ ಸಭೆಯನ್ನು ಮುಂದೂಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ, ಉಪಾಧ್ಯಕ್ಷ ಧರ್ಮಪ್ಪ ಸೇರಿದಂತೆ ಸದಸ್ಯರು, ಅಭಿವೃದ್ಧಿ ಅಧಿಕಾರಿ ಹೇಮಲತಾ ಹಾಜರಿದ್ದರು.