ಮಡಿಕೇರಿ, ಜೂ. ೧೪ : ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟಿçÃಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ವತಿಯಿಂದ ೨೦೨೧-೨೨ ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ತಾ. ೧೫ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ನಗರಸಭಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ರವಿಕುಶಾಲಪ್ಪ, ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಡಿ.ನಿರ್ಮಲ, ನಗರಸಭೆ ಪೌರಾಯುಕ್ತ ರಾಮದಾಸ್, ನಗರಸಭೆ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಸರೋಜಿನಿ ಇತರರು ಪಾಲ್ಗೊಳ್ಳಲಿದ್ದಾರೆ.