ಚೆಟ್ಟಳ್ಳಿ, ಜೂ. ೧೪: ಪ್ರಸ್ತುತ ಸಮಾಜದಲ್ಲಿ ಎಲ್ಲರನ್ನೂ ಒಂದೇ ವೇದಿಕೆ ತಂದು, ಒಗ್ಗೂಡಿಸುವ ಕಾರ್ಯ ಕ್ರೀಡೆಯಿಂದ ಮಾತ್ರ ಸಾಧ್ಯ ಎಂದು ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಎಸ್.ಆರ್.ಎಸ್ ಕ್ರಿಕೆಟರ್ಸ್ ಮೂರ್ನಾಡು ಇವರ ಆಶ್ರಯದಲ್ಲಿ ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಮೈದಾನದಲ್ಲಿ ನಡೆದ ೧೮ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯದೊಂದಿಗೆ ಮಾನಸಿಕವಾಗಿ ಕೂಡ ನಾವು ಬಲಿಷ್ಠರಾಗುತ್ತೇವೆ. ಗ್ರಾಮೀಣ ಭಾಗದಲ್ಲಿ ಹಲವಾರು ಉತ್ತಮ ಕ್ರೀಡಾಪಟುಗಳು ಜಿಲ್ಲೆಯಲ್ಲಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಆಗಬೇಕಾಗಿದೆ ಎಂದು ಪೊನ್ನಣ್ಣ ಹೇಳಿದರು. ಕಾಂಗ್ರೆಸ್ ಯುವ ಮುಖಂಡ ಡಾ. ಮಂಥರ್ ಗೌಡ ಮಾತನಾಡಿ, ಕ್ರೀಡೆಯಿಂದ ಪಡೆದ ಬಹುಮಾನವನ್ನು ಸಮಾಜದಲ್ಲಿ ಉತ್ತಮ ಕಾರ್ಯಕ್ರಮ ಗಳಿಗೆ ವಿನಿಯೋಗಿಸುವ ಕೆಲಸ ಮಾಡಬೇಕೆಂದು ಸಲಹೆಯಿತ್ತರು.

ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ಕ್ರೀಡಾಕೂಟಗಳು ಜಾತ್ಯತೀತವಾಗಿ ನಡೆಯಬೇಕು. ಸಮಾಜದಲ್ಲಿ ಯುವಕರು ತಾಳ್ಮೆಯಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳ ಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್.ಆರ್. ಎಸ್. ಕ್ರಿಕೆಟರ್ಸ್ ಅಧ್ಯಕ್ಷ ಜಾಸಿರ್ ಮೂರ್ನಾಡು, ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಕ್ರೀಡಾಕೂಟಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿ ಸುವುದು ಕಷ್ಟಕರವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಅನುದಾನವನ್ನು ಒದಗಿಸುವ ಕೆಲಸವನ್ನು ಜಿಲ್ಲೆಯ ರಾಜಕೀಯ ಮುಖಂಡರುಗಳು ಹಾಗೂ ಜನಪ್ರತಿನಿಧಿಗಳು ಮಾಡಬೇಕೆಂದು ಮನವಿ ಮಾಡಿದರು. ಫೈನಲ್ ಪಂದ್ಯದ ಉದ್ಘಾಟನೆಯನ್ನು ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ ಸ್ಥಾಪಕ ರಶೀದ್ ಎಡಪಾಲ ನೆರವೇರಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ, ಅಂತ ರ‍್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಖಲೀಲ್ ಮಡಿಕೇರಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಮೊಹಮ್ಮದ್ ರಫಿ, ಮತೀನ್, ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮೀರ್ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.