ಸಿದ್ದಾಪುರ. ಜೂ. ೧೪: ಕುಶಾಲನಗರ ತಾಲೂಕು ಕಚೇರಿಗೆ ಜಿಲ್ಲಾ ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ಸಾರ್ವಜನಿಕರ ಬಳಿ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.

ಇದೇ ಸಂದರ್ಭದಲ್ಲಿ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು ನೆಲ್ಲಿಹುದಿಕೇರಿಯ ಸಂತ್ರಸ್ತರಿಗೆ ಅರೆಕಾಡು ಬಳಿ ಗುರುತಿಸಿದ ಪುನರ್ವಸತಿ ಜಾಗದಲ್ಲಿ ಸೇತುವೆ ನಿರ್ಮಾಣಕ್ಕೆ ಹಣ ಮಂಜೂರಾತಿ ಆಗಿದೆ. ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು. ಮಳೆಗಾಲದ ಸಂದರ್ಭದಲ್ಲಿ ನದಿತೀರದಲ್ಲಿ ಪ್ರವಾಹ ಏರಿಕೆಯಾದಲ್ಲಿ ಅವರಿಗೆ ಆಶ್ರಯ ಪಡೆಯಲು ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್, ಉಪ ತಹಶೀಲ್ದಾರ್ ಮಧುಸೂದನ್, ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಿಗ ಸಚಿನ್ ಇನ್ನಿತರರು ಹಾಜರಿದ್ದರು.