ವೀರಾಜಪೇಟೆ, ಜೂ. ೧೪: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪರೀಕ್ಷೆ ಒಂದು ಮುಖ್ಯ ಘಟ್ಟ. ಕಷ್ಟಪಟ್ಟು ಓದುವ ಮೂಲಕ ತಂದೆ-ತಾಯಿ, ಶಿಕ್ಷಕರು ಹಾಗೂ ನಾಡಿಗೆ ಕೀರ್ತಿ ತರುವ ಶ್ರೇಷ್ಠ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.
ವೀರಾಜಪೇಟೆ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆದ ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ನಡೆದ ಈ ಸಾಲಿನ ೧೦ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಶೇ. ೧೦೦ ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ನಮ್ಮ ದೇಶದಲ್ಲಿ ಜ್ಞಾನಾಧಾರಿತ ಸಮಾಜ ಸೃಷ್ಟಿಯಾಗಲಿದೆ. ಇದಕ್ಕೆ ತಕ್ಕಂತೆ ವೀರಾಜಪೇಟೆ, ಜೂ. ೧೪: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪರೀಕ್ಷೆ ಒಂದು ಮುಖ್ಯ ಘಟ್ಟ. ಕಷ್ಟಪಟ್ಟು ಓದುವ ಮೂಲಕ ತಂದೆ-ತಾಯಿ, ಶಿಕ್ಷಕರು ಹಾಗೂ ನಾಡಿಗೆ ಕೀರ್ತಿ ತರುವ ಶ್ರೇಷ್ಠ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.
ವೀರಾಜಪೇಟೆ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆದ ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ನಡೆದ ಈ ಸಾಲಿನ ೧೦ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಶೇ. ೧೦೦ ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ನಮ್ಮ ದೇಶದಲ್ಲಿ ಜ್ಞಾನಾಧಾರಿತ ಸಮಾಜ ಸೃಷ್ಟಿಯಾಗಲಿದೆ. ಇದಕ್ಕೆ ತಕ್ಕಂತೆ ಮಾತನಾಡಿ, ಇಂತಹ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರಗಳನ್ನು ಸ್ವೀಕರಿಸುವ ವಿದ್ಯಾರ್ಥಿಗಳು ಮುಂದಿನ ಶಿಕ್ಷಣದಲ್ಲಿ ಇನ್ನೂ ಹೆಚ್ಚಿನ ಅಂಕಗಳನ್ನುಗಳಿಸಿ ಭವಿಷ್ಯವನ್ನು ರೂಪಿಸಿಕೊಳ್ಳುವ ಮೂಲಕ ದೇಶದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದರು.
ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಾಲಿನ ಹತ್ತನೇ ತರಗತಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ. ೧೦೦ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರನ್ನು ಶಾಸಕ ಬೋಪಯ್ಯ ಮತ್ತು ಅತಿಥಿಗಳು ಸನ್ಮಾನಿಸಿ, ಗೌರವಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ, ವೀರಾಜಪೇಟೆ ಕ್ಷೇತ್ರ ಸಂಯೋಜನಧಿಕಾರಿ(ಬಿಆರ್ಸಿ) ವನಜಾಕ್ಷಿ, ವೀರಾಜಪೇಟೆ ಅಕ್ಷರ ದಾಸೋಹ ಸಹಾಯಕ ನಿದೇರ್ಶಕ ರಾಜೇಶ್, ವೀರಾಜಪೇಟೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಬಿ.ಆರ್. ಗಾಯತ್ರಿ, ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಪಿ.ಆರ್. ಅಯ್ಯಪ್ಪ ಹಾಗೂ ವಿಶೇಷ ಆಹ್ವಾನಿತರಾಗಿ ಸಂತ ಅನ್ನಮ್ಮ ಶಾಲೆಯ ಧರ್ಮಗುರು ದಯಾನಂದ ಪ್ರಭು, ಬಿಆರ್ಸಿ ಅಧಿಕಾರಿ ಉತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಶಾಲೆಯ ಮುಖ್ಯ ಶಿಕ್ಷಕಿಯರು, ಶಿಕ್ಷಕ ವೃಂದದವರು, ಮಕ್ಕಳು ಮತ್ತು ಪಾಲಕ ಪೋಷಕರು ಉಪಸ್ಥಿತರಿದ್ದರು.