ಮಡಿಕೇರಿ, ಜೂ. ೧೪: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ಅವರುಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ ಘಟಕದ ಪ್ರಮುಖರು ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸುವAತೆ ಆಗ್ರಹಿಸಿದರು.

ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಮಾತನಾಡಿ ಇಸ್ಲಾಂ ಧರ್ಮದವರು ಆರಾಧಿಸುವ ಪ್ರವಾದಿ ಮಹಮ್ಮದ್ ಅವರ ಕುರಿತು ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟರ್ ಹಾಕಿದ ನವೀನ್ ಕುಮಾರ್ ಜಿಂದಾಲ್ ಹಾಗೂ ನೂಪುರ್ ಶರ್ಮಾ ಅವರ ವಿರುದ್ಧ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಮನವಿ ಮಾಡಿದರು.

ಅಲ್ಪಸಂಖ್ಯಾತರ ಘಟಕದ ಮಡಿಕೇರಿ ನಗರಾಧ್ಯಕ್ಷ ಕೆ.ಜಿ.ಪೀಟರ್, ಉಪಾಧ್ಯಕ್ಷ ಕೆ.ಎ.ಯಾಕುಬ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ವಕ್ತಾರ ತೆನ್ನಿರ ಮೈನಾ, ಘಟಕದ ಬ್ಲಾಕ್ ಅಧ್ಯಕ್ಷ ಖಲೀಲ್ ಬಾಷಾ, ಡಿ.ಸಿ.ಸಿ ಸದಸ್ಯ ಅಬ್ದುಲ್ ಸುಕೂರ್ ಸೇರಿದಂತೆ ಪದಾಧಿಕಾರಿಗಳು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.