ಮಡಿಕೇರಿ, ಜೂ. ೧೫: ಕೊಡಗು ಜಿಲ್ಲೆಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೧-೨೨ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಮತ್ತು ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಡಿಕಲ್ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಮೆಡಿಕಲ್ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸುವ ದಿನಾಂಕವನ್ನು ತಾ. ೩೦ ರವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಭೇಟಿ ನೀಡಬೇಕಾದ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.

ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫/ ೮೦೫೦೭೭೦೦೦೪ ಇ-ಮೇಲ್ bಛಿತಿಜ.sಛಿhoಟಚಿಡಿshiಠಿ @ಞಚಿಡಿಟಿಚಿಣಚಿಞಚಿ.gov.iಟಿ, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂರವಾಣಿ ಸಂಖ್ಯೆ: ೦೮೦-೩೫೨೫೪೭೫೭ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ರಂಗಶಿಕ್ಷಣ ಡಿಪ್ಲೋಮಾ

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಶಿಕ್ಷಣದ ಅವಧಿ ಒಂದು ವರ್ಷ. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.ಯಾಗಿದ್ದು ಪದವೀಧರರಿಗೆ ಆದ್ಯತೆ ಕೊಡಲಾಗುವುದು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.

ಅರ್ಜಿಯನ್ನು ಪ್ರಾಚಾರ್ಯರು ಶ್ರೀ ಶಿವಕುಮಾರ ಶಾಲೆ ಸಾಣೇಹಳ್ಳಿ-೫೭೭೫೧೫, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್‌ಸೈಟ್ ತಿತಿತಿ.ಣheಚಿಣಡಿesಛಿhooಟsಚಿಟಿehಚಿಟಟi.oಡಿg ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್‌ಲೋಡ್ ಮಾಡಿ ತಾ. ೩೦ ರೊಳಗೆ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸುವುದು. ಜುಲೈ ೬, ೭ ಮತ್ತು ೮ ರಂದು ಸಂದರ್ಶನ ನಡೆಯಲಿದೆ. (ಅಭ್ಯರ್ಥಿಯು ಮೂರು ದಿನ ಕಡ್ಡಾಯವಾಗಿ ಪಾಲ್ಗೊಳ್ಳಬೇಕು), ಆಯ್ಕೆ ಆದ ಅಭ್ಯರ್ಥಿಗಳಿಗೆ ಜುಲೈ ೧೫ ರಿಂದ ತರಗತಿಗಳು ಪ್ರಾರಂಭವಾಗುತ್ತದೆ. ಹೆಚ್ಚಿನ ಮಾಹಿತಿಗೆ ೯೪೪೮೩೯೮೧೪೪, ೯೪೮೨೯೪೨೩೯೪ ನ್ನು ಸಂಪರ್ಕಿಸಬಹುದು ಎಂದು ಸಾಣೇಹಳ್ಳಿ ಶ್ರೀ ರಂಗ ಪ್ರಯೋಗ ಶಾಲೆ ಪ್ರಾಚಾರ್ಯರು ತಿಳಿಸಿದ್ದಾರೆ.

‘ಗ್ರಾಮ ಒನ್’ ಕೇಂದ್ರ ಆರಂಭಕ್ಕೆ ಪ್ರಾಂಚೈಸಿಗಳಿAದ

ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ “ಗ್ರಾಮ ಒನ್” ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ೯೨ ಗ್ರಾಮ ಪಂಚಾಯಿತಿಗಳಲ್ಲಿ "ಗ್ರಾಮ ಒನ್" ಯೋಜನೆಯನ್ನು ಪ್ರಾರಂಭಿಸಲಾಗಿದೆ. ಆ ದಿಸೆಯಲ್ಲಿ ೨೪ ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಾಂಚೈಸಿಗಳು (hಣಣಠಿs://ತಿತಿತಿ.ಞಚಿಡಿಟಿಚಿಣಚಿಞಚಿoಟಿe.gov.iಟಿ/Pubಟiಛಿ/ಉಡಿಚಿmಔಟಿeಈಡಿಚಿಟಿಛಿhiseeಖಿeಡಿms) ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಿಯಾಂಕ ಕೆ.ಎಸ್., ಜಿಲ್ಲಾ ಯೋಜನಾ ನಿರ್ದೇಶಕರು, ಜಿಲ್ಲಾಧಿಕಾರಿ ಅವರ ಕಚೇರಿ ಮೊಬೈಲ್ ಸಂಖ್ಯೆ +೯೧ ೮೮೬೧೬೮೨೧೨೦) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.

ಗ್ರಾ.ಪಂ. ವಿವರ ಇಂತಿದೆ: ಹಾಕತ್ತೂರು, ಬೆಟ್ಟಗೇರಿ, ಎಮ್ಮೆಮಾಡು, ಕರಿಕೆ, ದೊಡ್ಡಮಳ್ತೆ, ತೋಳೂರು ಶೆಟ್ಟಳ್ಳಿ, ಬೆಟ್ಟದಳ್ಳಿ, ಗರ್ವಾಲೆ, ಕೆದಕಲ್, ಹರದೂರು, ತೊರೆನೂರು, ನಾಲ್ಕೂರು ಶಿರಂಗಾಲ, ಕದನೂರು, ಅಮ್ಮತ್ತಿ, ಬೆಟೋಳಿ, ಹಾತೂರು, ನಿಟ್ಟೂರು, ಬಲ್ಯಮಂಡೂರು, ಮಾಯಮುಡಿ, ಕೆ. ಬಾಡಗ, ಪೊನ್ನಪ್ಪಸಂತೆ, ಬಿ. ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ ಗ್ರಾ.ಪಂ.ಗಳು.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ

ವೀರಾಜಪೇಟೆ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೨೦೨೨-೨೩ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೇ. ೭೫ ಸ್ಥಾನಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಉಳಿದ ಶೇ. ೨೫ ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕಚೇರಿ ದೂ. ೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.