ಮಡಿಕೇರಿ, ಜೂ. ೧೬: ತಲಕಾವೇರಿಯಿಂದ ಕುಶಾಲನಗರ ದವರೆಗೆ ಕಾವೇರಿ ನದಿ ದಂಡೆಯಲ್ಲಿ ಆಗಿರುವ ಭೂ ಒತ್ತುವರಿ ಸಂಬAಧ ಸರ್ವೆ ಕಾರ್ಯ ಕೈಗೊಳ್ಳುವುದರ ಜೊತೆಗೆ ನದಿಪಾತ್ರದಲ್ಲಿ ಗಿಡ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳ ನಡುವೆ ಸಾಮರಸ್ಯದ ಕೊರತೆಯಿಂದ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ. ಇದು ಮುಂದುವರಿಯಬಾರದು. ಕೊಡಗಿನಲ್ಲಿ ಪರಿಸರವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು. ಹಾಡಿ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಶೀಘ್ರವಾಗಿ ನಡೆಯಬೇಕು. ಅಧಿಕಾರಿಗಳು ಜನಪ್ರತಿನಿಧಿಗಳ ಸೂಚನೆಯಂತೆ ಜನಪರವಾಗಿ ಕೆಲಸ ನಿರ್ವಹಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಬAಧಿಸಿ ದಂತೆ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಿದರೆ ಸಹಿಸಲಾಗದು ಎಂದು ರವಿಕುಶಾಲಪ್ಪ ಹೇಳಿದರು.
ನದಿ ಪಾತ್ರದಲ್ಲಿ ಗಿಡ-ಮರ ಬೆಳೆಸುವಲ್ಲಿ ಕ್ರಮವಹಿಸುವಂತೆ ಕಾವೇರಿ ನೀರಾವರಿ ಇಲಾಖೆಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕಾವೇರಿ ನದಿ ದಡದಲ್ಲಿ ಒತ್ತುವರಿ ಮಾಡಿಕೊಂಡಿದ್ದಲ್ಲಿ ಪರಿಶೀಲಿಸ ಬೇಕಿದೆ. ಮನೆ ಕಟ್ಟಿದ್ದಲ್ಲಿ ಗ್ರಾ.ಪಂ. ವತಿಯಿಂದ ಪರಿಶೀಲಿಸಿ ಕ್ರಮವಹಿಸಬೇಕಿದೆ ಎಂದರು.
ಈ ಸಂದರ್ಭ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಯಾವುದೇ ವಾಸದ ಮನೆ ನಿರ್ಮಾಣ ಮಾಡುವಾಗ ಸ್ಥಳೀಯ ಸಂಸ್ಥೆಯಿAದ ಅನುಮತಿ ಪಡೆಯಬೇಕಿದೆ. ಅನುಮತಿ ಪಡೆದಿರುವವರಿಗೆ ಮಾತ್ರ ವಿದ್ಯುತ್ ಸಂಪರ್ಕ, ಕುಡಿಯುವ ನೀರು ಕಲ್ಪಿಸಲು ಸಾಧ್ಯ. ಆ ನಿಟ್ಟಿನಲ್ಲಿ ಕಾವೇರಿ ನದಿ ಪಾತ್ರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಿಯಮಾನುಸಾರ ಕ್ರಮವಹಿಸಬೇಕಿದೆ ಎಂದರು.
ಕೂಟಿಯಾಲ ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ ೩೦೧ ಲಕ್ಷ ರೂ. ಬಿಡುಗಡೆಯಾಗಿದೆ. ಚೆಟ್ಟಿಮಾನಿ, ಚೆಂಬು, ದಬ್ಬಡ್ಕ, ಗಾಳಿಬೀಡು-ಸುಬ್ರಹ್ಮಣ್ಯ-ಕಡಮಕಲ್ಲು ರಸ್ತೆ ನಿರ್ಮಾಣ ಸಂಬAಧ ಪರ್ಯಾ ಯವಾಗಿ ಹೆಚ್ಚುವರಿ ಭೂಮಿ ನೀಡಲಾಗಿದೆ. ಆ ನಿಟ್ಟಿನಲ್ಲಿ ಸೇತುವೆ ಮತ್ತು ರಸ್ತೆ ನಿರ್ಮಾಣ ಮಾಡಲು ಮುಂದಾಗಬೇಕು. ಬಿಸಿಲೆ-ಬಾಣವಾರ, ತೊಡಿಕಾನ ಮತ್ತಿತರ ಕಡೆಗಳಲ್ಲಿ ರಸ್ತೆ ನಿರ್ಮಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಹೇಳಿದರು.
ಅರಣ್ಯ ಇಲಾಖೆ ವಿರುದ್ಧ ಕೆಜಿಬಿ ಗರಂ
ಗAಗಾ ಕಲ್ಯಾಣ ಯೋಜನೆ ಅನುಷ್ಠಾನಕ್ಕೆ ಸಂಬAಧಿಸಿದAತೆ ಅರಣ್ಯ ಇಲಾಖೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾಗಿರುವ ಶಾಸಕ ಕೆ.ಜಿ. ಬೋಪಯ್ಯ ಅವರು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ ಘಟನೆ ಸಭೆಯಲ್ಲಿ ನಡೆಯಿತು. ‘ಮಾತೆತ್ತಿದರೆ ಅರಣ್ಯ ಉಳಿಸಬೇಕು ಎಂದು ಹೇಳುತ್ತೀರಾ; ಅಕ್ರಮ ಮರ ಸಾಗಾಟವನ್ನು ನಿಲ್ಲಿಸಿದ್ದೀರಾ? ಜಿಲ್ಲೆಯಲ್ಲಿ ಅಕ್ರಮ ಮಿಲ್‌ಗಳೆಷ್ಟಿವೆ? ಅಲ್ಲೇನು ನಡೆಯುತ್ತಿದೆ ಎಂಬ ಬಗ್ಗೆ ಎಂದಾದರೂ ತೆರಳಿ ಪರಿಶೀಲಿಸಿದ್ದೀರಾ?’ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಬೋಪಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಾಲ್ದಾರೆ ವ್ಯಾಪ್ತಿಯಲ್ಲಿ ಅನಾದಿ ಕಾಲದಿಂದಲೂ ವಾಸ ಮಾಡಿಕೊಂಡು ಬರುತ್ತಿರುವ ಕುಟುಂಬಗಳ ಕೊಳವೆ ಬಾವಿಗೆ ಗಂಗಾ ಕಲ್ಯಾಣ ಯೋಜ£ ೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಅನುಮತಿ ನೀಡಿರುವಾಗ ವಿದ್ಯುತ್ ಮಾರ್ಗಕ್ಕೆ ತೊಂದರೆ ನೀಡುತ್ತಿರುವುದು ಏಕೆ ಎಂದು ಕೆ.ಜಿ.ಬೋಪಯ್ಯ ಪ್ರಶ್ನಿಸಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕುಪತ್ರ ನೀಡಲಾಗಿದೆ. ಆದರೂ ಜಿಲ್ಲೆಯ ತಿತಿಮತಿ, ಬಾಳೆಲೆ ಮತ್ತಿತರ ಕಡೆಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಸಂಪರ್ಕಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ ಎಂಬ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಅರಣ್ಯವೂ ಉಳಿಯಬೇಕು. ಜೊತೆಗೆ ಅಲ್ಲಿ ಬದುಕುತ್ತಿರುವ ಮೂಲ ನಿವಾಸಿಗಳಿಗೆ ಮೂಲ ಸೌಲಭ್ಯವನ್ನು ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಕಾನೂನಿನ ಇತಿಮಿತಿಯಲ್ಲಿ ಮಾನವೀಯತೆ ಯೊಂದಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಅವಕಾಶ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೆ.ಜಿ.ಬೋಪಯ್ಯ ನಿರ್ದೇಶನ ನೀಡಿದರು.
ಸೆಸ್ಕ್ ಇಇ ಅಶೋಕ್ ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೆಳಕು ಯೋಜನೆಯಡಿ ೧೩೫೪ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
(ಮೊದಲ ಪುಟದಿಂದ) ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ ೧೨೪ ಕುಟುಂಬಗಳಲ್ಲಿ ೩೫ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ೬೭ ಕುಟುಂಬಗಳು ಅರಣ್ಯ ಪ್ರದೇಶದಲ್ಲಿದ್ದು, ಅರಣ್ಯ ಹಕ್ಕುಪತ್ರ ಇಲ್ಲದಿರುವುದರಿಂದ ಈ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮಾಲ್ದಾರೆ ವ್ಯಾಪ್ತಿಯಲ್ಲಿ ೨೨ ಕುಟುಂಬಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಸಾಮಾಜಿಕ ಅರಣ್ಯ ವಿಭಾಗದ ಅಧಿಕಾರಿ ಅವರು ಜಿಲ್ಲೆಯಲ್ಲಿ ೨.೩೦ ಲಕ್ಷ ಗಿಡ ವಿತರಿಸಲಾಗುತ್ತಿದೆ ಎಂದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಐಟಿಡಿಪಿ ಇಲಾಖಾ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್, ಪೂವಯ್ಯ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವೀರಾಜಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರಾದ ಗಿರೀಶ್ ಗಣಪತಿ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಪಿ.ಲಕ್ಷಿö್ಮ, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ತಹಶೀಲ್ದಾರ್ ಪಿ.ಎಸ್.ಮಹೇಶ್, ಗೋವಿಂದರಾಜು, ಯೋಗಾನಂದ, ಮಹೇಶ್, ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ವಿರೂಪಾಕ್ಷ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಇತರರು ಇದ್ದರು.
ಅರಣ್ಯ ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶಶಿ ಪಿ.ಟಿ., ಸುನಿಲ್ ಅಹ್ಮದ್, ಮಲ್ಲನಗೌಡ, ಶಿವಕುಮಾರ್, ಸುಬ್ರಾಯ, ಬಾಬು ರಾಠೋಡ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.