ಮಡಿಕೇರಿ, ಜೂ. ೧೫: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಅಂಗಡಿಗಳನ್ನು ಮುಖ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಅಂದಾಜು ೧೦ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ. ೧೧೦೦ ದಂಡ ವಸೂಲಿ ಮಾಡಲಾಯಿತು.