ಮಡಿಕೇರಿ, ಜೂ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ವೀರಾಜಪೇಟೆ, ವಕೀಲರ ಸಂಘ, ಚೈಲ್ಡ್ಲೈನ್-೧೦೯೮, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ವ್ಯಾಪ್ತಿಯಲ್ಲಿರುವ ತುಂಡುಮುAಡಗೆ ಕೊಲ್ಲಿಯ ಗದ್ದೆಹಾಡಿಯಲ್ಲಿ ನಡೆಯಿತು.

ನಾಗರಹೊಳೆಯಲ್ಲಿರುವ ಗಿರಿಜನ ಆಶ್ರಯ ಶಾಲೆಯ ಆವರಣದಿಂದ ಜಾಥಾವು ಪ್ರಾರಂಭಗೊAಡು ಹಾಡಿಯ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಬಾಲ ಕಾರ್ಮಿಕ ಪದ್ಧತಿಯನ್ನು ವಿರೋಧಿಸಿ ಶಿಕ್ಷಣದ ಮಹತ್ವದ ಬಗ್ಗೆ ಘೋಷವಾಕ್ಯ ಮೂಲಕ ಜಾಗೃತಿ ಮೂಡಿಸಲಾಯಿತು.

ನಂತರ ತುಂಡುಮುAಡಗೆ ಕೊಲ್ಲಿ ಗದ್ದೆಹಾಡಿಯ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ವೀರಾಜಪೇಟೆ ಕಾನೂನು ಸೇವೆಗಳ ಸಮಿತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಹಾಗೂ ಸದಸ್ಯ ಕಾರ್ಯದರ್ಶಿ ಸಂತೋಷ ಕೊಠಾರಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸಂವಿಧಾನದಲ್ಲಿರುವ ವ್ಯವಸ್ಥೆಗೆ ತಕ್ಕಂತೆ ವಿವಿಧ ಯೋಜನೆಗಳನ್ನು ಸರ್ಕಾರವು ಜಾರಿ ಮಾಡಿದೆ. ಮಕ್ಕಳಿಗೆ ಶಾಲಾ ಶಿಕ್ಷಣವನ್ನು ಒದಗಿಸುವುದು ಪ್ರತಿ ನಾಗರಿಕರ ಕರ್ತವ್ಯವಾಗಿದೆ ಹಾಗೂ ಬಾಲಕಾರ್ಮಿಕ ಪದ್ಧತಿ ಯನ್ನು ಪ್ರತಿಯೊಬ್ಬರೂ ವಿರೋಧಿಸುವ ಮೂಲಕ ಜವಾಬ್ದಾರಿ ಯುತ ನಾಗರಿಕನಾಗಬೇಕು ಎಂದು ಅವರು ಹೇಳಿದರು.

ಕಾರ್ಮಿಕ ಇಲಾಖೆ ಅಧಿಕಾರಿ ಅನಿಲ್ ಬಿ. ಬಗಟಿ ಅವರು ಮೊದಲಿಗೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರತಿಜ್ಙಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ಕಾರ್ಮಿಕ ಇಲಾಖೆಯಲ್ಲಿರುವ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು ಹಾಗೂ ಅರ್ಹರು ಇದರ ಸೌಲಭ್ಯಗಳನ್ನು ಪಡೆದು ಜೀವನ ಸುಧಾರಿಸಿಕೊಳ್ಳಲು ತಮ್ಮ ಮಕ್ಕಳನ್ನು ಯಾವುದೇ ಕೆಲಸಗಳಿಗೆ ಕಳುಹಿಸದೆ ಕಡ್ಡಾಯವಾಗಿ ಶಾಲೆಗಳಿಗೆ ಕಳುಹಿಸಲು ಕರೆ ನೀಡಿದರು.

ವಿಶೇಷ ಮಕ್ಕಳ ಪೊಲೀಸ್ ಘಟಕದ ಸುಮತಿ ಮಾತನಾಡಿ, ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಮಾಡಬೇಡಿ. ಮಕ್ಕಳು ಶಿಕ್ಷಣದಿಂದ ಹೊರಗುಳಿದರೆ ಸಮಾಜದ ಮೇಲೆ ದುಷ್ಪಾರಿಣಾಮ ವಾಗುತ್ತದೆ. ಇದರಿಂದ ಮಕ್ಕಳು ಬಾಲ ಕಾರ್ಮಿಕರಾಗಿ, ಬಾಲ್ಯ ವಿವಾಹ, ಮಕ್ಕಳ ಮೇಲೆ ದೌರ್ಜನ್ಯ, ಮಕ್ಕಳ ಸಾಗಾಣಿಕೆಗೆ ತುತ್ತಾಗುವ ಸಾಧ್ಯತೆಗಳು ಇದೆ. ಇದರಿಂದ ಮಕ್ಕಳ ಸರ್ವತೋ ಮುಖ ಬೆಳವಣಿಗೆ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ನಾವೆಲ್ಲ ಒಂದಾಗಿ ಕೆಲಸ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು. ಸ್ತಿçà ಶಕ್ತಿ ಒಕ್ಕೂಟದ ಕೊಡಗು ಜಿಲ್ಲಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯಧ್ಯಕ್ಷೆ ರೆಹಾನಾ ಸುಲ್ತಾನ ಮಾತನಾಡಿ, ಪ್ರತಿವರ್ಷ ಜೂನ್ ೧೨ ರಂದು ವಿಶ್ವದಾದ್ಯಂತ ಬಾಲ ಕಾರ್ಮಿಕ ಪದ್ಧತಿ ದಿನ ಆಚರಿಸಲಾಗುತ್ತಿದೆ. ಈ ಅನಿಷ್ಠ ಪದ್ಧತಿಯಿಂದ ಮಕ್ಕಳ ಮಾನಸಿಕ ಹಾಗೂ ದೈಹಿಕ ಶೋಷಣೆಯಾಗುವ ಜೊತೆಗೆ ಅವರ ಮೂಲಭೂತ ಹಕ್ಕಾದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರ ಹಾಗೂ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಪೋಷಕರ ಹಾಗೂ ಸಾರ್ವಜನಿಕರ ಸಹಕಾರ ಮತ್ತು ಪಾತ್ರ ಮಹತ್ವದ್ದು ಎಂದು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ನಾಗರಹೊಳೆ ಅರಣ್ಯ ಹಕ್ಕು ಸಮಿತಿ ಹಾಗೂ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಶಿವು ಜೆ.ಎ. ಕರಡಿಕಲ್ಲು, ನಾಗರಹೊಳೆ ರಾಜ್ಯ ಮೂಲ ನಿವಾಸಿ ವೇದಿಕೆಯ ಉಪಾಧ್ಯಕ್ಷ ಜೆ.ಕೆ. ತಿಮ್ಮ ಮಾತ ನಾಡಿದರು. ಹಾಡಿಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್ ಎನ್., ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್. ಶಿರಾಜ್ ಅಹ್ಮದ್, ನಾಲ್ಕೇರಿ ಗ್ರಾ.ಪಂ. ಅಧ್ಯಕ್ಷೆ ಹೆಚ್.ಆರ್. ಮೀನಾ, ಪೊನ್ನಂಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ, ಪೊನ್ನಂಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರು ಶಾಂತಪ್ಪ, ನಾಲ್ಕೇರಿ ಗ್ರಾ.ಪಂ. ಉಪಾಧ್ಯಕ್ಷ ಸಿ.ಸಿ. ಸಚಿನ್ ಕುಮಾರ್, ನಾಗರಹೊಳೆ ಗದ್ದೆಹಾಡಿಯ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಜೆ.ಬಿ. ಮನು, ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಚೈಲ್ಡ್ಲೈನ್-೧೦೯೮ ನಿರ್ದೇಶಕ ವಿ.ಎಸ್. ರಾಯ್ ಡೇವಿಡ್, ಕುಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ತಂಡದ ತರಬೇತಿದಾರ ಡಾ. ಅಲಿಮಾ ಪಿ.ಹೆಚ್ ಇತರರು ಪಾಲ್ಗೊಂಡಿದ್ದರು.