ಮಡಿಕೇರಿ, ಜೂ. ೧೫: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ತಾ. ೧೭ ರಂದು ನಡೆಯಲಿದೆಯೆಂದು ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಗಂಗೋತ್ರಿ ಕಟ್ಟಡದಲ್ಲಿ ತೆರೆಯಲಾಗಿರುವ ನೂತನ ಕಚೇರಿಯನ್ನು ಉದ್ಯಮಿ ದಾಮೋದರ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ. ರಮೇಶ್ ಮಾಡಲಿದ್ದಾರೆ. ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ್ ಕಾಮತ್, ಉದ್ಯಮಿ ಪ್ರಶಾಂತ್, ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದÀÄ ತಿಳಿಸಿದ್ದಾರೆ.