ಸಿದ್ದಾಪುರ, ಜೂ. ೧೫: ಶ್ರೀ ಮುತ್ತಪ್ಪ ಯುವ ಕಲಾ ಸಂಘ ನೆಲ್ಲಿಹುದಿಕೇರಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಮಡಿಕೇರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ರಕ್ತದಾನ ಶಿಬಿರ ನೆಲ್ಲಿಹುದಿಕೇರಿಯ ವಿ.ಎಸ್.ಎಸ್. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ನೆಲ್ಲಿಹುದಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಸದಸ್ಯರು ಸಿದ್ದಾಪುರ, ಜೂ. ೧೫: ಶ್ರೀ ಮುತ್ತಪ್ಪ ಯುವ ಕಲಾ ಸಂಘ ನೆಲ್ಲಿಹುದಿಕೇರಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಮಡಿಕೇರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ರಕ್ತದಾನ ಶಿಬಿರ ನೆಲ್ಲಿಹುದಿಕೇರಿಯ ವಿ.ಎಸ್.ಎಸ್. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ನೆಲ್ಲಿಹುದಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಸದಸ್ಯರು ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾತನಾಡಿ, ಯುವ ಸಮೂಹವು ಆರು ತಿಂಗಳಿಗೊಮ್ಮೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಹೃದಯ ಸಂಬAಧಿಸಿದ ರೋಗಗಳು, ತೂಕ ಕಡಿಮೆ ಇರುವವರು ಹಾಗೂ ೧೮ ವಯಸ್ಸಿಗಿಂತ ಕಡಿಮೆ ಇರುವವರು ರಕ್ತದಾನಕ್ಕೆ ಅನರ್ಹರಾಗಿರುತ್ತಾರೆ ಎಂದರು. ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ಪ್ರಾಸ್ತಾವಿಕ ನುಡಿಯಾಡಿದರು. ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಅಧ್ಯಕ್ಷ ಶರಣ್ ಪ್ರಕಾಶ್ ದಿನದ ಮಹತ್ವದ ಕುರಿತು ಮಾತನಾಡಿದರು. ಶಿಬಿರದಲ್ಲಿ ಸುಮಾರು ೫೦ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಕಾರ್ಯದರ್ಶಿ ವಿನೋದ್ ಸ್ವಾಮಿನಾಥನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಆನಂದ್ ಎನ್., ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ಜೋಸೆಫ್ ಶ್ಯಾಮ್, ಕೆಪಿಎಸ್ ಶಾಲೆಯ ಪ್ರಾಂಶುಪಾಲ ಆಂಥೋನಿ ಆಲ್ವಾಸ್, ನೆಲ್ಲಿಹುದಿಕೇರಿ ಗ್ರಾ.ಪಂ. ಪಿಡಿಓ ಅನಿಲ್ ಕುಮಾರ್, ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಪದಾಧಿಕಾರಿಗಳಾದ ಪ್ರಣವ್, ಶಿಂಜಿತ್, ಜೆಡಿಎಸ್ ಮುಖಂಡ ಶಿಹಾಬುದ್ದಿನ್ ವಿಪಿಎಸ್, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಶ್ರೀ ಮುತ್ತಪ್ಪ ಯುವ ಕಲಾ ಸಂಘದ ಸದಸ್ಯರು ಹಾಜರಿದ್ದರು.