ಮಡಿಕೇರಿ, ಜೂ. ೧೫: ಎನ್.ಎಸ್.ಎಸ್. ವಿದ್ಯಾರ್ಥಿಗಳು ಜನಸಾಮಾನ್ಯರಲ್ಲಿ ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆ, ಜೀವ ವೈವಿಧ್ಯ ಹಾಗೂ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.
ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಗರದ ನಗರಸಭಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ "ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ" ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ಕುರಿತ ವಿಚಾರಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು.
ಜೀವ ಸಂಕುಲದ ಅಮೂಲ್ಯ ಹಾಗೂ ಅಪರೂಪದ ಸಸ್ಯ ಹಾಗೂ ಜೀವಿ ಸಂಪತ್ತನ್ನು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗೆ ಹೆಚ್ಚಿನ ಗಮನಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಕಾಪಾಡುವ ಮೂಲಕ ಪರಿಸರದಲ್ಲಿ ಹೆಚ್ಚು ಹೆಚ್ಚು ಗಿಡ - ಮರಗಳನ್ನು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಪಣತೊಡಬೇಕು ಎಂದರು.
ಅರಣ್ಯ ಸಂಪತ್ತು ದೇಶದ ಅಮೂಲ್ಯ ಸಂಪತ್ತುಗಳಲ್ಲಿ ಒಂದಾಗಿದ್ದು, ಅರಣ್ಯ ಸಂಪತ್ತು ವೃದ್ಧಿಸುವ ಕಾರ್ಯದಲ್ಲಿ ನಾವು ಜಾಗೃತಿ ವಹಿಸಬೇಕು. ಅರಣ್ಯ ಸಂರಕ್ಷಣೆ ಮಾಡಿದಲ್ಲಿ ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದ ಪಾರಾಗಬಹುದು. ಎನ್.ಎಸ್.ಎಸ್. ವಿದ್ಯಾರ್ಥಿಗಳು ಜಲಪ್ರಳಯ ಮತ್ತು ಭೂ ಕುಸಿತದಂತಹ ಪ್ರಕೃತಿ ವಿಕೋಪ ಮತ್ತಿತರ ಸಂಕಷ್ಟದ ಪರಿಸ್ಥಿತಿಯಲ್ಲಿ ಸ್ವಯಂ ಸೇವಕರಾಗಿ ರಾಷ್ಟಿçÃಯ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರೇಮಕುಮಾರ್ ಹೇಳಿದರು.
ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಟಿ.ಜಿ. ಪ್ರೇಮಕುಮಾರ್, ಜಗತ್ತಿನ ೭೦೦ ಕೋಟಿ ಜನರು ಜೀವಿಸಲು ಜೀವಿಗಳು ‘ಇರುವುದೊಂದೇ ಭೂಮಿ' ಇದರ ಸಂರಕ್ಷಣೆ ಮತ್ತು ಇದನ್ನು ಹಾನಿಮಾಡದೇ ಮುಂದಿನ ಪೀಳಿಗೆಗೆ ನೀಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕೆ.ಪಿ. ಕುಸುಮ ಮಾತನಾಡಿ, ನಮ್ಮ ಪರಿಸರಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ಕಾಪಾಡಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ/ ಯುವ ಸಮುದಾಯ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಜಿಲ್ಲಾ ಎನ್.ಎಸ್.ಎಸ್. ಅಧಿಕಾರಿ ವನಿತ್ ಕುಮಾರ್ ಎನ್.ಎಸ್.ಎಸ್. ಧ್ಯೇಯೋದ್ದೇಶಗಳ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಡಿ. ನಿರ್ಮಲ, ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರೊ. ಎಂ.ಎಸ್. ಪ್ರಕಾಶ್, ಸಹ ಶಿಬಿರಾಧಿಕಾರಿಗಳಾದ ಕೆ.ಎಸ್. ಪೂರ್ಣಿಮ, ಸಹಾಯಕ ಪ್ರಾಧ್ಯಾಪಕ ಪ್ರೊ. ಬಿ.ಆರ್. ಶಶಿಧರ್, ದೈಹಿಕ ಶಿಕ್ಷಣ ನಿರ್ದೇಶಕ ಎವರೆಸ್ಟ್ ರೋಡ್ರಿಗಸ್, ಪ್ರೊ. ಟಿ.ಎಲ್. ತ್ಯಾಗರಾಜ್,
ಪ್ರೊ. ಎಂ.ಇ. ತೃಪ್ತಿ, ಪ್ರೊ. ಎನ್. ನಂಜುAಡ ಸ್ವಾಮಿ, ಪ್ರೊ. ರಂಜನ್ ಬೋಪಯ್ಯ, ಪ್ರೊ. ಶಾಮ್ ಪ್ರಸಾದ್ ಇತರರು ಇದ್ದರು.
ನಂತರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ವತಿಯಿಂದ ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಆಂದೋಲನದ ಅಂಗವಾಗಿ ಪರಿಸರ ಜಾಗೃತಿ ಅಭಿಯಾನ ನಡೆಸಲಾಯಿತು.