ಮಡಿಕೇರಿ, ಜೂ. ೧೬: ಕೊಡಗು ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಪುಷ್ಪಾವತಿ ಅವರು ಇಂದು ಜೆಡಿಎಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ಖಾನ್, ಮಡಿಕೇರಿ ನಗರಾಧ್ಯಕ್ಷ ಎಂ.ಎ. ಮುಸ್ತಾಫ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶಿರ್ ಮೂರ್ನಾಡು, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನಿಲ್ ಮತ್ತಿತರರು ಹಾಜರಿದ್ದರು.