ಮಡಿಕೇರಿ, ಜೂ.೧೬: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಬಾಹ್ಯ ಸೇವಾ ಕೇಂದ್ರ ಇವರ ವತಿಯಿಂದ ತಾ.೧೭ ಮತ್ತು ೧೮ ರಂದು ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಶ್ರವಣ ಸಾಧನ ವಿತರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ತಾ. ೧೭ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೋಧಕ ಆಸ್ಪತ್ರೆಯ ಉಪನ್ಯಾಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.