ಮಡಿಕೇರಿ, ಜೂ.೧೬: ಅಂಚೆ ಅದಾಲತ್ನ ಸಭೆಯು ತಾ. ೧೭ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬAಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.